ಜುಲೈ 18 ಕ್ಕೆ ರಾಷ್ಟ್ರಪತಿ ಚುನಾವಣೆ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದ್ದು, ರಾಷ್ಟ್ರಪತಿ ಚುನಾವಣೆಯ ದಿನಾಂಕವನ್ನ ಚುನಾವಣಾ ಆಯೋಗ ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದು, ಇದೇ ಜುಲೈ 18ರಂದು ಚುನಾವಣೆ ನಡೆಸಲಾಗುವುದು ಎಂದು ಪ್ರಕಟಿಸಿದರು.

ಜೂನ್ 15 ರಂದು ಅಧಿಸೂಚನೆ ಹೊರಡಿದಿಸಲಾಗುತ್ತಿದ್ದು, ನಾಮಪತ್ರ ಸಲ್ಲಿಸಲು ಜೂನ್ 29 ಕೊನೆದಿನ ವಾಗಿರುತ್ತದೆ ಎಂದು ಆಯುಕ್ತರು ತಿಳಿಸಿದರು.

ಲೋಕಸಭೆ ಮತ್ತು ರಾಜ್ಯಸಭೆ ಸಂಸದರು ರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ. ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಒಟ್ಟಾರೆ 776 ಸಂಸದರಿರುತ್ತಾರೆ. ಲೋಕಸಭೆಯಲ್ಲಿ 543 ಮತ್ತು ರಾಜ್ಯಸಭೆಯಲ್ಲಿ 233 ಸಂಸದರು ಇರುತ್ತಾರೆ. ರಾಜ್ಯಸಭೆ ಮತ್ತು ಲೋಕಸಭೆ ಸಂಸದರು ಆಯಾ ರಾಜ್ಯಗಳ ಶಾಸಕರ ಸಂಖ್ಯೆಯ ಮೇಲೆ ನಿರ್ಧರಿತವಾಗುತ್ತದೆ. ಉತ್ತರಪ್ರದೇಶ ಅತಿದೊಡ್ಡ ರಾಜ್ಯವಾಗಿದ್ದು ಅತಿ ಹೆಚ್ಚು ಶಾಸಕರನ್ನು ಹೊಂದಿದೆ. ಅದರ ನಂತರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಹೆಚ್ಚು ಶಾಸಕರನ್ನು ಹೊಂದಿದೆ. ಒಟ್ಟು 4,120 ಶಾಸಕರಿಂದ ರಚನೆಯಾದ ಎಲೆಕ್ಟೊರಲ್‌ ಕಾಲೇಜ್‌ ಮೂಲಕ ಆಯ್ಕೆ ನಡೆಯಲಿದೆ.

Donate Janashakthi Media

Leave a Reply

Your email address will not be published. Required fields are marked *