ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಮೇಲುಗೈ ಸಾಧಿಸಿದ ವಿದ್ಯಾರ್ಥಿ ವನಿತೇನಿಯರು

ಬೆಂಗಳೂರು: ಕರ್ನಾಟಕ ಪಿಯು ಮಂಡಳಿ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ.

2021-22ನೇ ಸಾಲಿನ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ನಾಲ್ವರು, ವಾಣಿಜ್ಯ ವಿಭಾಗದ ನಾಲ್ವರು ಹಾಗೂ ಕಲಾ ವಿಭಾಗದ ಇಬ್ಬರು ಅತ್ಯಧಿಕ ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದಾರೆ. ಅಲ್ಲದೆ 91,106 ವಿದ್ಯಾರ್ಥಿಗಳು ಅಧಿಕ ಅಂಕಗಳಿವ ಮೂಲಕ ಉತ್ತೀರ್ಣ ಹೊಂದಿದ್ದಾರೆ. ​

ಮಲ್ಲೇಶ್ವರದ ಪಿಯು ಮಂಡಳಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದರು.

2022ರ ಏಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ನೋಂದಣಿ ಮಾಡಿಕೊಂಡಿದ್ದ 6,84,255 ವಿದ್ಯಾರ್ಥಿಗಳ ಪೈಕಿ 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಶೇ.61.88ರಷ್ಟು ಅಂದರೆ 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ವಿಜ್ಞಾನ ವಿಭಾಗದ ಹೆಚ್ಚಿನ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಪ್ರತಿಬಾರಿಯಂತೆ ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ.

ಪರೀಕ್ಷೆ ಬರೆದ 3,37,006 ಬಾಲಕಿಯರ ಪೈಕಿ 2,31,586 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಶೇಕಡಾವಾರು ಲೆಕ್ಕದಲ್ಲಿ 68.72ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ 3,46,557 ಬಾಲಕರ ಪೈಕಿ 1,91,380 ಮಕ್ಕಳು ಪಾಸ್ಸಾಗಿದ್ದಾರೆ. ಶೇಕಡಾವಾರು ಲೆಕ್ಕದಲ್ಲಿ 55.22% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗಕ್ಕೆ 2,28,167 ಮಂದಿ, ವಾಣಿಜ್ಯ ವಿಭಾಗಕ್ಕೆ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಪಿಯುಸಿ ಪರೀಕ್ಷೆಯಲ್ಲಿ ದಕ್ಷಣ ಕನ್ನಡ ಜಿಲ್ಲೆಯ ಶೇ 88.02ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೊಳ್ಳುವ ಮೂಲಕ ಮೊದಲ ಸ್ಥಾನ ಪಡೆದುಕೊಂಡರೆ, ಪಕ್ಕದ ಉಡುಪಿ ಜಿಲ್ಲೆ 2ನೇ ಸ್ಥಾನ ಪಡೆದುಕೊಂಡಿದೆ. ವಿಜಯಪುರ 3ನೇ ಸ್ಥಾನ ಹಾಗೂ ಬೆಂಗಳೂರು ದಕ್ಷಿಣ 4ನೇ ಸ್ಥಾನ ಪಡೆದುಕೊಂಡಿದೆ. ಉತ್ತರ ಕನ್ನಡ 5ನೇ ಸ್ಥಾನ ಪಡೆದಿದ್ದು, ಚಿತ್ರದುರ್ಗ ಜಿಲ್ಲೆ (ಶೇ.49.31) ಕೊನೆಯ ಸ್ಥಾನ ಪಡೆದುಕೊಂಡಿದೆ.

ತೇರ್ಗಡೆ ಲೆಕ್ಕಚಾರದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ನೀಡಿದ್ದು, ನಗರದ ಪ್ರದೇಶದ  ವಿದ್ಯಾರ್ಥಿಗಳನ್ನು ಹಿಂದಿಕ್ಕಿದ್ದಾರೆ. ನಗರಪ್ರದೇಶದಲ್ಲಿ ಶೇ.61.78 ರಷ್ಟು ಫಲಿತಾಂಶ ಬಂದಿದ್ದು, ಗ್ರಾಮಾಂತರದಲ್ಲಿ ಶೇ.62.18 ರಷ್ಟು ಫಲಿತಾಂಶ ಬಂದಿದೆ.

ಕನ್ನಡ ವಿಷಯದಲ್ಲಿ 563 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ. ಇಂಗ್ಲಿಷ್ ವಿಷಯದಲ್ಲಿ ಇಬ್ಬರು ವಿದ್ಯಾರ್ಥಿಗಳು  100ಕ್ಕೆ 100 ಅಂಕ. ಗಣಿತ ವಿಷಯದಲ್ಲಿ 14,200 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ.

ಪೂರಕ ಪರೀಕ್ಷೆಯ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಗೊಳ್ಳಲಿದೆ ಎಂದು ತಿಳಿಸಲಾಗಿದೆ.

ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳು

ಬಳ್ಳಾರಿಯ ಕಲಾ ವಿಭಾಗದ ಶ್ವೇತಾ ಭೀಮಶಂಕರ ಬೈರಗೊಂಡ ಮತ್ತು ಕೊಟ್ಟೂರಿನ ಸಹನಾ ಮಡಿವಾಳರ್ ಅವರು 600 ಅಂಕಗಳಲ್ಲಿ ತಲಾ 594 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದ ಮಾನವ ವಿನಯ್ ಕೇಜ್ರಿವಾಲ್, ನೀಲು ಸಿಂಗ್, ಆಕಾಶ್​ ದಾಸ್, ನೇಹಾ.ಬಿ.ಆರ್ 600 ಅಂಕಗಳಲ್ಲಿ ತಲಾ 596 ಅಂಕಗಳಿಸಿದ್ದಾರೆ. ವಿಜ್ಞಾನ ವಿಭಾಗದ  ಸಿಮ್ರಾನ್​ ಶೇಷರಾವ್, ಇಲಂ ಮೊಹಮ್ಮದ್​ ರಫೀಕ್, ಸಾಯಿ ಚಿರಾಗ್, ಶ್ರೀಕೃಷ್ಣ ಪೇಜತಾಯ, ಭವ್ಯಾ ನಾಯರ್ ತಲಾ 597 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿಕೊಂಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *