ಸಿನಿಮಾ ನೋಡಿ ಕಣ್ಣಿರಿಡುವ ಮುಖ್ಯಮಂತ್ರಿಗೆ ಪಠ್ಯ ಪುಸ್ತಕ ಅವಾಂತರ ಕಾಣುತ್ತಿಲ್ಲವೇ?

ಬೆಂಗಳೂರು: ಪರಿಷ್ಕೃತ ಪಠ್ಯಪುಸ್ತಕಗಳ ಬಗ್ಗೆ ಲೇಖಕ ಹಾಗೂ ಚಿಂತಕ ಕುಂ.ವೀರಭದ್ರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ʼ777 ಚಾರ್ಲಿʼ ಸಿನಿಮಾದ ನಾಯಿಯ ನಟನೆ ಮೆಚ್ಚಿ ಕಣ್ಣೀರಿಟ್ಟು, ತೆರಿಗೆ ವಿನಾಯಿತಿ ನೀಡಿದ್ದಾರೆ. ಇಷ್ಟೊಂದು ಹೃದಯ ವೈಶಾಲ್ಯತೆ ಮೆರೆಯುವವರಿಗೆ ಪರಿಷ್ಕೃತ ಪಠ್ಯ ಪುಸ್ತಕದ ಅವಾಂತರಗಳು‌ ಕಾಣಿಸುತ್ತಿಲ್ಲವೆ? ಎಂದು ಪ್ರಶ್ನಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿರುವ ಕುಂ. ವೀರಭದ್ರಪ್ಪ ಅವರು ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರನ್ನ ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಕೇಸರೀಕರಣದ ಪಠ್ಯ ಪರಿಷ್ಕರಣೆ ವಿರುದ್ಧ ಬೃಹತ್ ಪ್ರತಿಭಟನಾ ಆಕ್ರೋಶ

ಗೌರವಾನ್ವಿತ ಮುಠ್ಠಾಳರನ್ನ ಪಠ್ಯ ಸಮಿತಿಗೆ ನೇಮಕ ಮಾಡಿರುವುದೇ ತಪ್ಪು. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಟ್ಯೂಟೋರಿಯಲ್ ನಡೆಸುವವರಿಗೆ ಪಠ್ಯ ರಚನೆ‌ ನೀಡಿರುವುದು ಸರಿಯಲ್ಲ. ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯನ್ನೇ ತಿರುಚುವಂತ ಹೀನ ವ್ಯಕ್ತಿ ಪಠ್ಯ ರಚನೆ ಮಾಡುವುದು ಸರಿಯೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಹಾಗೂ ಸಂವಿಧಾನ ವ್ಯವಸ್ಥೆಗೆ ರೋಹಿತ್ ಚಕ್ರತೀರ್ಥ ಅಪಮಾನ ಮಾಡಿರುವುದು ಅಲ್ಲದೆ, ಬಸವಣ್ಣ ಸೇರಿ ಅನೇಕ ದಾರ್ಶನಿಕರಿಗೆ ಅವಹೇಳನ ಮಾಡಿದ್ದಾರೆ. ಕೂಡಲೇ ಆತನನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *