ಮೋದಿ ಭೇಟಿ ಹಿನ್ನೆಲೆ: ಹಿಂದಿ ಪ್ರಚಾರದ ಫ್ಲೆಕ್ಸ್‌ಗಳಿಗೆ ಮಸಿ ಬಳಿದ ಕರವೇ ಕಾರ್ಯಕರ್ತರು

ಬೆಂಗಳೂರು: ನಗರದ ತುಂಬೆಲ್ಲಾ ಪ್ರಧಾನಿ ಮೋದಿ ಆಗಮನದ ಹಿನ್ನೆಲಯಲ್ಲಿ ಅಳವಡಿಸಿರುವ ಫೆಕ್ಸ್‌ಗಳಲ್ಲಿ ಹಿಂದಿಯಲ್ಲಿಯೂ ಪ್ರಚಾರಕ್ಕೆ ಬಳಸಲಾಗಿತ್ತು. ಈ ಹಿನ್ನೆಲಯಲ್ಲಿ ಮೈಸೂರು ರಸ್ತೆಯಲ್ಲಿ ಅಳವಡಿಸಲಾಗಿದ್ದ ನೂರಾರು ಫ್ಲೆಕ್ಸ್‌ಗಳಿಗೆ ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ನಿಂದ ಮೈಸೂರು ಭೇಟಿ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ಸಚಿವ ಮುನಿರತ್ನ ನಾಯ್ಡು ಮತ್ತು ಬೆಂಬಲಿಗರು ಹಿಂದಿ ಭಾಷೆಯಲ್ಲಿ ಫ್ಲೆಕ್ಸ್‌ಗಳನ್ನು ಅಳವಡಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ, ಕರವೇ ಯುವ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ್ ನೇತೃತ್ವದಲ್ಲಿ ಮಸಿ ಬಳಿದರು. ಪೊಲೀಸರು ಅವರನ್ನು ತಡೆಯಲು ಮುಂದಾದರು.

ಕರವೇ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತಿಕ್, ಪದ್ಮನಾಭನಗರ ಕ್ಷೇತ್ರದ ಅಧ್ಯಕ್ಷ ನಿತೀಶ್ ಮನು ಗೌಡ ಸೇರಿದಂತೆ ಪ್ರಮುಖರು ಈ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡು, ಕರ್ನಾಟಕದಲ್ಲಿ ಹಿಂದಿಹೇರಿಕೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬ ಎಚ್ಚರಿಕೆ ನೀಡಿದರು.

Donate Janashakthi Media

Leave a Reply

Your email address will not be published. Required fields are marked *