ಶಿಮ್ಲಾ: ಹಿಮಾಚಲ ಪ್ರದೇಶದ ಕುಲುವಿನಲ್ಲಿ ಬಸ್ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಭೀಕರವಾಗಿ ಸಾವಿಗೀಡಾಗಿದ್ದಾರೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.
ಈ ಬಗ್ಗೆ ಕುಲು ಜಿಲ್ಲಾಧಿಕಾರಿ ಅಶುತೋಷ್ ಗರ್ಗ್ ಮಾಹಿತಿ ನೀಡಿದ್ದು, ಸೈಂಜ್ಗೆ ತೆರಳುತ್ತಿದ್ದ ಶಾಲಾ ಬಸ್ಸು ಇಂದು(ಜುಲೈ 04) ಬೆಳಿಗ್ಗೆ 8.30ರ ಸುಮಾರಿಗೆ ಜಂಗ್ಲಾ ಗ್ರಾಮದ ಬಳಿ ಕಣಿವೆಗೆ ಬಿದ್ದಿದೆ. ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸೈಂಜ್ ಕಣಿವೆಯ ನ್ಯೂಲಿ-ಶಂಶಾರ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತವಾಗಿದೆ. ಸುಮಾರು 40 ವಿದ್ಯಾರ್ಥಿಗಳು ಶಾಲಾ ಬಸ್ಸಿನಲ್ಲಿದ್ದರು ಎಂದು ತಿಳಿದುಬಂದಿದ್ದು, ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಧಾವಿಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.
ಸಿಎಂ ಕಂಬನಿ:
ಕುಲ್ಲುವಿನ ಸೈಂಜ್ ಕಣಿವೆಯಲ್ಲಿ ಖಾಸಗಿ ಬಸ್ಸು ಅಪಘಾತವಾಗಿದ್ದು, ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ತಂಡ ಧಾವಿಸಿದೆ ಮತ್ತು ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರ ಕುಟುಂಬಕ್ಕೆ ಸಂತಾಪಗಳು, ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ತಿಳಿಸಿದ್ದಾರೆ.