ಡಿಸ್ಪುರ: ಅಸ್ಸಾಂನ ನಾಗಾಂವ್ ಪ್ರದೇಶದಲ್ಲಿ ಪುರುಷ ಮತ್ತು ಮಹಿಳೆಯೊಬ್ಬರು ಶಿವ-ಪಾರ್ವತಿ ವೇಷಧರಿಸಿ ಇಂಧನ, ಆಹಾರ ಪದಾರ್ಥಗಳು ಮತ್ತು ಇತರ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಶನಿವಾರ ಸಂಜೆ ಇಬ್ಬರು ಶಿವ ಮತ್ತು ಪಾರ್ವತಿಯ ವೇಷ ಧರಿಸಿ ಇಬ್ಬರೂ ಬೈಕ್ನಲ್ಲಿ ನಾಗಾವ್ ನ ಕಾಲೇಜು ಚೌಕಕ್ಕೆ ಆಗಮಿಸಿ ವಾಹನದಲ್ಲಿ ಇಂಧನ ಖಾಲಿಯಾಗುತ್ತಿರುವ ಬಗ್ಗೆ ಬೀದಿ ನಾಟಕ ಪ್ರದರ್ಶನ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದರು ಮತ್ತು ಸರ್ಕಾರ ಕೇವಲ ಬಂಡವಾಳಶಾಹಿಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ ಪ್ರಸ್ತುಪಪಡಿಸಿದ್ದಾರೆ.
Nagaon, Assam | Man who played Lord Shiva in nukkad natak arrested for allegedly hurting religious sentiments
An accused who dressed up as Lord Shiva arrested, will be presented in court. 2 others, suspected to be involved are yet to be nabbed: Manoj Rajvanshi, Sadar PS Incharge pic.twitter.com/DMQXjPX3MP
— ANI (@ANI) July 10, 2022
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದಿರುವ ಅವರು, ಜನರು ಬೀದಿಗಿಳಿದು ಏರುತ್ತಿರುವ ಹಣದುಬ್ಬರದ ವಿರುದ್ಧ ಪ್ರತಿಭಟಿಸುವಂತೆ ಒತ್ತಾಯಿಸಿದರು. ಇದಾದ ಬಳಿಕ ಬಡಾ ಬಜಾರ್ ಪ್ರದೇಶಕ್ಕೆ ಆಗಮಿಸಿದ ಇವರು ಇದೇ ರೀತಿ ಬೀದಿ ನಾಟಕ ಪ್ರದರ್ಶಿಸಿದರು.
ಇದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಗಮನಕ್ಕೆ ಬಂದಿದ್ದು, ಈ ಘಟನೆಯನ್ನು ಖಂಡಿಸಿದೆ ಮತ್ತು ಹಿಂದೂ ಸನಾತನ ಧರ್ಮದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿದೆ. ಇವರ ವಿರುದ್ಧ ನಾಗೋನ್ ಸದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಿವ ವೇಷಧಾರಿ ಬಿರಿಂಚಿ ಬೋರಾನನ್ನು ಬಂಧಿಸಲಾಗಿದೆ.