ಗುಜರಾತ್: ಗುಜರಾತ್ನಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾದ ಅನಾಹುತದಲ್ಲಿ 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 27,896 ಮಂದಿಯನ್ನು ನೆರೆಪೀಡಿತ ಪ್ರದೇಶಗಳಿಂದ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ’ ಎಂದು ಸಚಿವ ರಾಜೇಂದ್ರ ತ್ರಿವೇದಿ ಹೇಳಿದ್ದಾರೆ.
ಅಹ್ಮದಾಬಾದ್, ನವಸಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ನದಿಗಳು ಪ್ರವಾಹ ಮಟ್ಟ ಮೀರಿ ಹರಿಯುತ್ತಿವೆ. ನವಸಾರಿ ಕಂಪ್ಲೀಟ್ ಮುಳುಗಡೆಯಾಗಿದೆ. ದೋಣಿಗಳೇ ನದಿ ನೀರಿನಲ್ಲೇ ಕೊಚ್ಚಿ ಹೋಗ್ತಿವೆ. ಅಷ್ಟು ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ ಮೋದಿ ಮಾಡೆಲ್ ಸೃಷ್ಠಿಯಾಗಿದೆ.
ರೈಲು ಸಂಚಾರ ರದ್ದು : ತೀವ್ರ ಮಳೆಯಿಂದಾಗಿ ಗುಜರಾತ್ ನ ರಂಗು ಹದಗೆಟ್ಟಿದ್ದು ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ರೈಲು ಹಳಿಗಳ ಮೇಲೆ ನೀರು ನಿಂತಿರುವುದರಿಂದ ಅನೇಕ ರೈಲುಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮ ರೈಲ್ವೆ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದೆ. ‘ವಡೋದರಾ ವಿಭಾಗದ ದಾಭೋಯ್ ಮತ್ತು ಏಕತಾ ನಗರ ನಿಲ್ದಾಣಗಳ ನಡುವಿನ ಹಳಿಗಳ ವೈಫಲ್ಯದಿಂದಾಗಿ, ಪಶ್ಚಿಮ ರೈಲ್ವೆಯ ಕೆಲವು ರೈಲುಗಳನ್ನು ಇಂದು ರದ್ದುಗೊಳಿಸಲಾಗಿದೆ’
ಎಲ್ಲೆಲ್ಲಿ ಮಳೆ: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಮುಂದಿನ 24 ಗಂಟೆಗಳಲ್ಲಿ ದೆಹಲಿ, ಯುಪಿ, ಬಿಹಾರ, ಕೇರಳ, ಮಧ್ಯಪ್ರದೇಶ, ಛತ್ತೀಸ್ಗಢ, ಮರಾಠವಾಡ, ಮಹಾರಾಷ್ಟ್ರ, ರಾಜಸ್ಥಾನ, ಕೊಂಕಣ, ಗೋವಾ, ಕರಾವಳಿ ಕರ್ನಾಟಕ, ಅಂಡಮಾನ್, ಜಮ್ಮು-ಕಾಶ್ಮೀರದಲ್ಲಿ ಮಳೆ ಮುನ್ಸೂಚನೆ ನಿಡಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಒಡಿಶಾ, ತೆಲಂಗಾಣ, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಗುಜರಾತ್ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಮನೆಯಿಂದ ಹೊರಗೆ ಕಾಲಿಡುವಾಗ ಎಚ್ಚರಿಕೆ ವಹಿಸಬೇಕು ಎಂದು ಮುನ್ಸೂಚನೆ ನೀಡಲಾಗಿದೆ.