ಹುಬ್ಬಳ್ಳಿ : ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೋರ್ವ ನೀರು ಪಾಲಾದ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದಲ್ಲಿ ನಡೆದಿದೆ.
ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ಕಿರಣ ಇಂದು ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದರು. ಈ ಸಮಯದಲ್ಲಿ ಸೆಲ್ಫಿಗಾಗಿ ನೀರಸಾಗರ ಜಲಾಶಯದ ದಡದಲ್ಲಿ ನಿಂತಿದ್ದರು. ಈ ವೇಳೆ ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದಾರೆ. ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀರಿನಲ್ಲಿ ಕೊಚ್ಚಿ ಹೋದ ಯುವಕನನ್ನು 22 ವರ್ಷದ ಕಿರಣ್ ರಜಪೂತ ಎಂದು ಗುರುತಿಸಲಾಗಿದೆ. ಕಿರಣ್ ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ನಿವಾಸಿಯಾಗಿದ್ದು, ಭಾನುವಾರ ಗೆಳೆಯರೊಡನೆ ಪ್ರವಾಸಕ್ಕೆಂದೂ ಹೋಗಿದ್ದನು. ಈ ಸಮಯದಲ್ಲಿ ಸೆಲ್ಫಿಗಾಗಿ ಜಲಾಶಯದ ದಡದಲ್ಲಿ ನಿಂತಿದ್ದ ಯುವಕ, ನೀರಿನ ರಭಸ ಹೆಚ್ಚಾಗಿದ್ದರಿಂದ ಕೊಚ್ಚಿ ಹೋಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಿರಣ್ ಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಕಿರಣ್ ರಜಪೂತ ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗಿವೆ. ಇನ್ನು ಜಲಪಾತ, ಹಳ್ಳ – ಕೊಳ್ಳಗಳಿಗೆ ಜೀವ ಕಳೆ ಬಂದಿದೆ. ಇದನ್ನು ಕಣ್ತುಂಬಿಕೊಳ್ಳಲೆಂದು ಹೋಗುತ್ತಿರೋ ಜನ ಸೆಲ್ಫಿ ಹುಚ್ಚಾಟ ನಡೆಸಿ ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಸ್ವಯಂ ಜಾಗೃತಿ ಮತ್ತು ಪೊಲೀಸ್‌ರು ಕೂಡ ಎಚ್ಚರಿಕೆಯನ್ನು ವಹಿಸಬೇಕಾದ ಅಗತ್ಯವಿದೆ.