ಕಲುಷಿತ ನೀರು ಕುಡಿದು ಬಾಲಕಿ ಸಾವು

ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನ ಗೊನಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ನಂತರ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, 20 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿ, ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಕುಲಷಿತ ನೀರು ಕುಡಿದ ನಂತರ ಕೆಲವು ಜನರು ಬೇಧಿ, ವಾಂತಿ ಮತ್ತಿತರ ಲಕ್ಷಣಗಳ ಬಗ್ಗೆ ದೂರು ನೀಡಿದ ಬಳಿಕ ಎರಡು ದಿನಗಳ ನಂತರ ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ. ಕಂಪ್ಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸುಕನ್ಯಾ ಭಾನುವಾರ ರಾತ್ರಿ ಸಾವನ್ನಪ್ಪಿದ್ದಾಳೆ.

ಆರೋಗ್ಯಾಧಿಕಾರಿಗಳು ನೀರಿನ ಮಾದರಿಯನ್ನು ಸಂಗ್ರಹಿಸಿದ್ದು, ಪರೀಕ್ಷೆಗಾಗಿ ವಿವಿಧ ಪ್ರಯೋಗಾಲಯಗಳಿಗೆ ಕಳುಹಿಸಿದ್ದಾರೆ. ನರಿಹಾಲ ಹೊಳೆ ನೀರು, ಆಹಾರದ ನೀರಿನೊಂದಿಗೆ ಬೆರೆತು ನೀರು ಕಲುಷಿತವಾಗಿರುವುದಾಗಿ ಗೋನಾಳ್ ಗ್ರಾಮಸ್ಥರು ಆರೋಪಿಸಿದ್ದಾರೆ.

ನೀರು ಕಲುಷಿತವಾಗಿರುವಂತೆ ಕಾಣುತ್ತಿದೆ. ಆದರೆ, ಪ್ರಯೋಗಾಲಯದ ಫಲಿತಾಂಶ ಬಂದ ಬಳಿಕವೇ ಅದು ದೃಢವಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್.ಎಲ್. ಜನಾರ್ಧನಾ ಹೇಳಿದ್ದಾರೆ. ಕಲುಷಿತ ನೀರಿನಿಂದ ಅಸ್ವಸ್ಥರಾದ 20 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಜಿಲ್ಲಾಡಳಿತದಿಂದ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದರು.

ಇತ್ತೀಚೆಗೆ ಸುರಿದ ಮಳೆಯಿಂದಾಗಿ ನಾರಿಹಳ್ಳದಲ್ಲಿ ನೀರು ಹರಿದಿದೆ. ಇದೇ ನೀರನ್ನು ಗ್ರಾಪಂನವರು ಸರಬರಾಜು ಮಾಡಿರುವುದೇ ಈ ಘಟನೆಗೆ ಕಾರಣ ಎನ್ನುವುದು ಗ್ರಾಮಸ್ಥರ ಆರೋಪವಾಗಿದೆ. ಕಳೆದ ಆರು ತಿಂಗಳ ಕೆಳಗೆ ವಿಜಯನಗರ ಜಿಲ್ಲೆಯ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 8 ಜನ ಸಾವನ್ನಪ್ಪಿದ್ದರು.

Donate Janashakthi Media

Leave a Reply

Your email address will not be published. Required fields are marked *