ಲಂಡನ್ ಸ್ಟುಡಿಯೋದಲ್ಲಿ ಹಿನ್ನಲೆ ಸಂಗೀತ ಮುಗಿಸಿದ ʻನಗುವಿನ ಹೂಗಳ ಮೇಲೆʼ

ನಾಯಕ ಅಭಿಷೇಕ್ ರಾಮದಾಸ್, ನಾಯಕಿ ಶರಣ್ಯಾ ಶೆಟ್ಟಿ ಅಭಿನಯಿಸಿರುವ ವೆಂಕಟ್ ಭಾರದ್ವಾಜ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’ ತೆರೆ ಮೇಲೆ ತರಲು ಸಜ್ಜಾಗಿದೆ.

‘ನಗುವಿನ ಹೂಗಳ ಮೇಲೆ’ ಚಿತ್ರವು ಲಂಡನ್‌ನಲ್ಲಿ ಹಿನ್ನೆಲೆ ಸಂಗೀತ ಮುದ್ರಣ ಮಾಡಲಾಗಿದೆ. ಚಿತ್ರದ ಸಂಗೀತ ನಿರ್ದೇಶಕ ಲವ್ ಪ್ರಾನ್ ಮೆಹತಾ ಲಂಡನ್ ನ ಮೆಲ್ಲಿಪ್ಲೋಸ್ ಸ್ಟುಡಿಯೋದಲ್ಲಿ ಚಿತ್ರದ ಹಿನ್ನೆಲೆ ಸಂಗೀತ, ಎಫೆಕ್ಟ್ಸ್, 7.1 ಸೌಂಡ್ ಮಾಡಲಾಗಿದೆ ಎಂದು ನಿರ್ದೇಶಕ ವೆಂಕಟ್ ಭಾರದ್ವಾಜ್ ಸಂತಸ ಹಂಚಿಕೊಂಡಿದ್ದಾರೆ.

ಈ ಹಿಂದೆ ಆಮ್ಲೆಟ್, ಕೆಂಪಿರ್ವೆ ಚಿತ್ರಗಳಿಗೆ ನಿರ್ದೇಶನ ಮಾಡಿದ್ದ ವೆಂಕಟ್ ಭಾರದ್ವಾಜ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಮಾಡಿದ್ದಾರೆ. ರೋಮ್ಯಾಂಟಿಕ್  ಜೊತೆಗೆ ಆಕ್ಷನ್ ಕಥಾಹಂದರ ಒಳಗೊಂಡ ಈ ಚಿತ್ರ ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣಗೊಂಡಿದೆ. ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಸಂಪೂರ್ಣ ಮುಗಿಸಿದ್ದು ಬಿಡುಗಡೆಗೆ ಸಿದ್ದವಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ನಾಯಕ ಅಭಿಷೇಕ್ ರಾಮದಾಸ್, ನಾಯಕಿ ಶರಣ್ಯಾ ಶೆಟ್ಟಿ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಬಾಲ ರಾಜವಾಡಿ, ಗಿರೀಶ್, ಆಶಾ ಸುಜಯ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತಾ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ.

ತೆಲುಗಿನ ಖ್ಯಾತ ನಿರ್ಮಾಪಕರಾದ ಕೆ ಕೆ ರಾಧಾಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ರೋಮ್ಯಾಂಟಿಕ್ ಲವ್ ಆಕ್ಷನ್ ನಗುವಿನ ಹೂಗಳ ಮೇಲೆ ಚಿತ್ರ ನಿರ್ಮಿಸುತ್ತಿದ್ದಾರೆ. ಇದು ಇವರ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಮೊದಲ ಕನ್ನಡ ಸಿನಿಮಾವಾಗಿದೆ. ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಲವ್ವ್ ಪ್ರಾಣ್ ಮೆಹ್ತಾ ಚಿತ್ರಕ್ಕೆ ಸಂಗೀತ, ಪ್ರಮೋದ್ ಭಾರತಿಯ ಛಾಯಾಗ್ರಹಣ, ಟೈಗರ್ ಶಿವು ಸಾಹಸ, ಚಂದ ಪಿ ಸಂಕಲನ, ಕಬ್ಬಡಿ ನರೇಂದ್ರಬಾಬು, ಚಿದಂಬರ ನರೇಂದ್ರ, ಕಿರಣ್ ರಾಜ್ ಸಾಹಿತ್ಯ ಸಿನಿಮಾಕ್ಕಿದೆ.

Donate Janashakthi Media

Leave a Reply

Your email address will not be published. Required fields are marked *