ಕೋವಿಡ್‌ ಪ್ರಕರಣ ಹೆಚ್ಚಳ: ಸ್ವಾತಂತ್ರ್ಯೋತ್ಸವದಂದು ಜನಸಂದಣಿಯಾಗದಂತೆ ತಡೆಯಲು ಕೇಂದ್ರ ಸೂಚನೆ

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯೆಂದು ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡದಂತೆ ಕ್ರಮವಹಿಸಬೇಕೆಂದು ಹಾಗೂ ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ನೀಡಿದೆ.

ದೇಶವು ಪ್ರತಿದಿನ ಸರಾಸರಿ 15,000 ಕ್ಕೂ ಹೆಚ್ಚಿನ ಕೋವಿಡ್‌ ಪ್ರಕರಣಗಳು ದಾಖಲಾಗುತ್ತಿವೆ. ಸ್ವಾತಂತ್ರ್ಯ ದಿನಾಚರಣೆ ಸಮೀಪಿಸಿದ್ದು, ಅಂದು ಯಾವುದೇ ರೀತಿಯ ದೊಡ್ಡ ಸಭೆಗಳಿಗೆ ಅವಕಾಶ ಮಾಡಿಕೊಡಬೇಡಿ. ಪ್ರತಿಯೊಬ್ಬರೂ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸಿದೆ.

ಅಲ್ಲದೆ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಪ್ರತಿ ಜಿಲ್ಲೆಯಲ್ಲಿಯೂ ‘ಸ್ವಚ್ಛ ಭಾರತ’ ಅಭಿಯಾನ ಕೈಗೊಳ್ಳಬೇಕು. ತಿಂಗಳ ಅವಧಿಯ ಅಭಿಯಾನ ಕೈಗೊಂಡು, ನಾಗರಿಕರು ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯವು ತಿಳಿಸಿದೆ.

ಸ್ವಾತಂತ್ರ್ಯ ದಿನಾಚರಣೆಯಂದು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲು ಗಿಡ ನೆಡುವ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಿ ಇಲಾಖೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.

ಭಾರತದಲ್ಲಿ ಸದ್ಯ 16,561 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,42,23,557 ಕ್ಕೆ ತಲುಪಿದೆ, ಆದರೆ ಸಕ್ರಿಯ ಪ್ರಕರಣಗಳು 1,23,535 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯು ಶುಕ್ರವಾರ ತಿಳಿಸಿದೆ.

Donate Janashakthi Media

Leave a Reply

Your email address will not be published. Required fields are marked *