ಎಲ್ಲ ಶಾಲೆ- ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಸಾಮೂಹಿಕ ಪ್ರಾರ್ಥನೆ ವೇಳೆ ರಾಷ್ಟ್ರಗೀತೆ ಹಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಗಸ್ಟ್ 17ರಂದು ಹೊರಡಿಸಿರುವ ಈ ಆದೇಶದಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

ಸರ್ಕಾರದ ಆದೇಶ ಜಾರಿಯಲ್ಲಿದ್ದರೂ, ಬೆಂಗಳೂರಿನ ಕೆಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬೆಳಗ್ಗೆ ಪ್ರಾರ್ಥನೆಯ ಸಮಯದಲ್ಲಿ ರಾಷ್ಟ್ರಗೀತೆ ಹೇಳುವುದು ಅಭ್ಯಾಸ ಮಾಡುತ್ತಿಲ್ಲ ಮತ್ತು ಈ ಬಗ್ಗೆ ಸರ್ಕಾರಕ್ಕೆ ದೂರುಗಳು ಬಂದಿವೆ.

ದೂರುಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಉತ್ತರ ಮತ್ತು ದಕ್ಷಿಣ ವಿಭಾಗದ ಉಪನಿರ್ದೇಶಕರು ಸಂಬಂಧಪಟ್ಟ ಶಾಲೆಗಳಿಗೆ ಭೇಟಿ ನೀಡಿ ಬೆಳಗ್ಗೆ ಪ್ರಾರ್ಥನೆಯಲ್ಲಿ ರಾಷ್ಟ್ರಗೀತೆ ಹಾಡುವ ಕಾರ್ಯ ನಡೆಯುತ್ತಿಲ್ಲ ಎಂದು ಖಚಿತಪಡಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಪ್ರಕಾರ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ. ಕೆಲವು ಶಾಲೆಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ. ಎಂಬ ದೂರುಗಳು ಬಂದಿವೆ. ಅದಕ್ಕೆ ಅವಕಾಶ ನೀಡಬಾರದು ಎಂದು ತಾಕೀತು ಮಾಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಮೈದಾನದ ಕೊರತೆ ಇದ್ದರೆ, ಕೊಠಡಿಗಳಲ್ಲೇ ರಾಷ್ಟ್ರಗೀತೆ ಹಾಡಿಸಬೇಕು ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ.

Donate Janashakthi Media

Leave a Reply

Your email address will not be published. Required fields are marked *