ಪತ್ನಿ ಖಾತೆಗೆ ₹2.69 ಕೋಟಿ ವರ್ಗಾಯಿಸಿದ ಬ್ಯಾಂಕ್ ಅಧಿಕಾರಿ

ಯಲ್ಲಾಪುರ : ‘ಪಟ್ಟಣದ ಬ್ಯಾಂಕ್ ಆಫ್ ಬರೋಡಾದ ಸಿಬ್ಬಂದಿಯೊಬ್ಬರು, ಸಹ ಸಿಬ್ಬಂದಿಯ ಪಾಸ್‌ವರ್ಡ್ ದುರ್ಬಳಕೆ ಮಾಡಿಕೊಂಡು ಬ್ಯಾಂಕ್ ಖಾತೆಯಿಂದ ₹ 2.69 ಕೋಟಿಗೂ ಅಧಿಕ ಹಣವನ್ನು ತನ್ನ ಹೆಂಡತಿಯ ಖಾತೆಗೆ ವರ್ಗಾಯಿಸಿ ಬಳಿಕ ನಾಪತ್ತೆಯಾಗಿದ್ದಾರೆ’ ಎಂದು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿದ್ದ, ಆಂಧ್ರಪ್ರದೇಶ ಮೂಲದ ಕುಮಾರ ಬೋನಾಲ ಎಂಬಾತ ಕಳೆದ ಏಪ್ರಿಲ್ 7ರಿಂದ ಸೆಪ್ಟೆಂಬರ್ 5ರ ನಡುವೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ. ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಅನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು, ಆಂಧ್ರದ ಚಿರಲಾದ ಎಸ್ಬಿಐನಲ್ಲಿ ಖಾತೆ ಹೊಂದಿರುವ ತನ್ನ ಪತ್ನಿ ರೇವತಿ ಗೊರ್ರೆಯ ಖಾತೆಗೆ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿ ಬ್ಯಾಂಕಿಗೆ ವಂಚನೆ ಮಾಡಿದ್ದಾನೆ.

ಈ ಕುರಿತು ಬ್ಯಾಂಕ್ ಆಫ್ ಬರೋಡಾ ಶಾಖೆಯ ವ್ಯವಸ್ಥಾಪಕ ವಿಘ್ನೇಶ್ವರ ಭಟ್ಟ, ‘ಪ್ರಕರಣದ ಕುರಿತು ಮೇಲಾಧಿಕಾರಿಗಳಿಗೆ ವರದಿ ನೀಡಲಾಗಿದೆ. ಆರೋಪಿಯು ನಾಪತ್ತೆಯಾಗಿರುವ ಕುರಿತು ಅವರ ಸೂಚನೆಯಂತೆ ದೂರು ದಾಖಲಿಸಲಾಗಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ. ಸದ್ಯ ಈ ಪ್ರಕರಣದಿಂದಾಗಿ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದವರಲ್ಲಿ ಆತಂಕ ಮನೆ ಮಾಡಿದೆ.

Donate Janashakthi Media

Leave a Reply

Your email address will not be published. Required fields are marked *