ವಿದ್ಯಾರ್ಥಿ ವಸತಿ ನಿಲಯ ಪ್ರವೇಶಾತಿ ಶೇ. 25ಕ್ಕೆ ಏರಿಕೆ: ಎಸ್ಎಫ್ಐ ಹೋರಾಟಕ್ಕೆ ಸಂದ ಜಯ

ಹಾವೇರಿ: ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳನ್ನು ಹೆಚ್ಚಿಸುವ ಮೂಲಕ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಕಲ್ಪಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 07 ರಂದು ರಾಜ್ಯಾದ್ಯಂತ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್ಎಫ್ಐ) ಪ್ರತಿಭಟನೆ ನಡೆಸಿತ್ತು.

ರಾಜ್ಯದಲ್ಲಿ ವಿದ್ಯಾರ್ಥಿ ಸಮುದಾಯ ಎಸ್ಎಫ್ಐ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ಹೋರಾಟಕ್ಕೆ ಮಣಿದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಬಯಸುವರಿಗೆ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಶೇ. 25 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಚಿವರ ನಿರ್ಧಾರವನ್ನು ಎಸ್ಎಫ್ಐ ಹಾವೇರಿ ಜಿಲ್ಲಾ ಸಮಿತಿ ಸ್ವಾಗತಿಸುತ್ತದೆ ಎಂದು ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಭೋವಿ ಪ್ರಕಟಣೆ ನೀಡಿದ್ದಾರೆ. ಆದರೆ ಕೇವಲ ಶೇ. 25ರಷ್ಟು ಪ್ರವೇಶಾವಕಾಶ ಹೆಚ್ಚಳ ಮಾಡಿದ ಮಾತ್ರಕ್ಕೆ ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ವಸತಿ ನಿಲಯ ಕಲ್ಪಿಸಲಾಗುವುದಿಲ್ಲ. ಶೇ. 25 ಹೆಚ್ಚಳದ ಬದಲಾಗಿ ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೂ ಸೌಲಭ್ಯ ಕಲ್ಪಿಸಿಕೊಡಬೇಕಾದದ್ದು ಸಚಿವರು ಹಾಗೂ ಸರ್ಕಾರದ ಕೆಲಸವಾಗಬೇಕು ಎಂದು ಆಗ್ರಹಿಸಿದ್ದಾರೆ.

ಅದೇ ರೀತಿ ಕೌನ್ಸಿಲಿಂಗ್ ಪದ್ಧತಿಯನ್ನು ಕೈ ಬಿಟ್ಟು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳನ್ನು ಹೆಚ್ಚಿಸುವುದರೊಂದಿಗೆ ವಸತಿ ನಿಲಯಗಳಲ್ಲಿನ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇತಿಹಾಸದಲ್ಲೇ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವರು ಹಾಗೂ ಮುಖ್ಯಮಂತ್ರಿಗಳು ಘೋಷಿಸಲಿ ಎಂದಿದ್ದಾರೆ.

ಸಚಿವರು ನೀಡಿರುವ ಭರವಸೆ ಹುಸಿಯಾದರೆ ಸಚಿವರ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಸ್‌ಎಫ್‌ಐ ಸಂಘಟನೆಐ ಜಿಲ್ಲಾ ಮುಖಂಡರಾದ ಅರುಣ್ ಕಡಕೋಳ, ಗುಡ್ಡಪ್ಪ ಮಡಿವಾಳರ, ರವಿ ಬಂಕಾಪುರ ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *