ಎಸ್ಸಿ-ಎಸ್ಟಿ ಕಾಯ್ದೆಯಡಿ ಸುಳ್ಳು ಪ್ರಕರಣ ದಾಖಲು: ದಯಾಮರಣ ಕೋರಿದ ಕುಟುಂಬ

ಅಲಿಗಢ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಮತ್ತು ಕಿರುಕುಳ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಿಂದ ನೊಂದ ಕುಟುಂಬ ದಯಾಮರಣ ಕೋರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ ಮಾಡಿದೆ.

ಕೊತ್ವಾಲಿ ಇಗ್ಲಾಸ್ ಪ್ರದೇಶದ ಹಸ್ತಾಪುರ ಗ್ರಾಮದಲ್ಲಿ ವಾಸವಾಗಿರುವ ಮುನ್ನಿದೇವಿ ಕುಟುಂಬದ ವಿರುದ್ಧ ಹತ್ತಕ್ಕೂ ಹೆಚ್ಚು ಸುಳ್ಳು ಪ್ರಕರಣಗಳು ದಾಖಲಾಗಿವೆ. ತಮ್ಮ ಮೇಲೆ ಎದುರಾಗಿರುವ ದೌರ್ಜನ್ಯವನ್ನು ಬಗೆಹರಿಸಬೇಕೆಂದು ಈ ಹಿಂದೆ ಗ್ರಾಮದಲ್ಲಿ ಮಹಾಪಂಚಾಯತ್ ನಡೆಯಿತು. ಆ ಸಂದರ್ಭದಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವುದಾಗಿ ಭರವಸೆ ನೀಡಿ ಮಹಾಪಂಚಾಯತ್‌ ಸಭೆಯನ್ನು ವಿಸರ್ಜಿಸಿದರು. ಮಹಾಪಂಚಾಯತ್ ಆಯೋಜಿಸಿದ್ದವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಮಗೆ ನ್ಯಾಯಯುತ ಪರಿಹಾರ ಸಿಗದೆ ಹಿನ್ನೆಲೆಯಲ್ಲಿ ಇದೀಗ ಮುಖ್ಯಮಂತ್ರಿಯಿಂದ ದಯಾಮರಣ ಪಡೆಯಲು ನಿರ್ಧರಿಸಿದ್ದು, ದಯಾಮರಣ ನೀಡುವಂತೆ ಒತ್ತಾಯಿಸಿ ಮನೆ ಮುಂದೆ ಭಿತ್ತಿಪತ್ರಗಳನ್ನು ಅಂಟಿಸಿದ್ದಾರೆ. ತಮ್ಮ ಆಸ್ತಿಯನ್ನು ಸರಕಾರ ಜಪ್ತಿ ಮಾಡಬೇಕು ಮತ್ತು ಸರಕಾರ ತಮ್ಮನ್ನು ಗಲ್ಲಿಗೇರಿಸಿ ನ್ಯಾಯ ಕೊಡಿಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಈ ಕುಟುಂಬದ ವಿರುದ್ಧ ಪ್ರಕರಣ ದಾಖಲಾಗವೆ ಎಂದು ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಪಲಾಶ್ ಬನ್ಸಾಲ್ ಹೇಳಿದ್ದಾರೆ. ಈ ಕುಟುಂಬದವರು ಮಹಿಳೆಯೊಬ್ಬಳಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ವಿಷಯದ ಬಗ್ಗೆ ಪರಿಶೀಲನೆ ನಡೆಸಿದ್ದು, ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *