ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಪಾಯಿ ನಗದು ನೀಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು 40 ಪರ್ಸೆಂಟ್ ಕಮಿಷನ್ನಲ್ಲಿ ನೀಡಿದ ಹಣವೇ?, 40 ಪರ್ಸೆಂಟ್ ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.
ಇದನ್ನೂ ಓದಿ : ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚ?
ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.
40% ಕಮಿಷನ್ನಲ್ಲಿ ನೀಡಿದ ಹಣವೇ?
40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ?
ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ?@BSBommai ಅವರೇ, ಆ 'ಲಂಚ'ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು.#SayCM— Karnataka Congress (@INCKarnataka) October 28, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ದೀಪಾವಳಿಯ ಸಂದರ್ಭದಲ್ಲಿ ರಾಜ್ಯದ ಪ್ರಮುಖ ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಲಾಗಿದೆ. ಆದರೆ ಕೆಲ ಪತ್ರಕರ್ತರು ಸ್ವೀಟ್ ಬಾಕ್ಸ್ ಜೊತೆ ನೋಟಿನ ಕಂತೆ ನೋಡಿದ ತಕ್ಷಣ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ.