ಕೊಲ್ಲೂರು: ಸಂಘಪರಿವಾರದ ಒತ್ತಡಕ್ಕೆ ಮಣಿದು ಐತಿಹಾಸಿಕ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಸಾಂಪ್ರದಾಯಿಕ ಸಲಾಮ್ ಮಂಗಳಾರತಿ ಪೂಜೆಯ ಹೆಸರು ಬದಲಾಯಿಸಲು ರಾಜ್ಯದ ಬಿಜೆಪಿ ಸರ್ಕಾರ ಮುಂದಾಗಿದೆ. ಈ ಪೂಜೆಯನ್ನು ಇದೀಗ “ದೀವಟಿಗೆ ಮಂಗಳಾರತಿ ಪೂಜೆ” ಎಂದು ಮರು ನಾಮಕರಣ ಮಾಡಲು ಮುಂದಾಗಿರುವ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಟಿಪ್ಪುಸುಲ್ತಾನ್ 1763ರಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ನೆನಪಿಗಾಗಿ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಇರುವ ಮೂಕಾಂಬಿಕೆ ದೇವಸ್ಥಾನದಲ್ಲಿ ಸಲಾಮ್ ಮಂಗಳಾರತಿ ಆಚರಣೆ ಸುಮಾರು 250 ವರ್ಷಕ್ಕೂ ಹೆಚ್ಚಿನ ಇತಿಹಾಸ ಹೊಂದಿದೆ. ಇದನ್ನು ದೀವಟಿಗೆ ಮಂಗಳಾರತಿ ಪೂಜೆ ಎಂದು ಮರುನಾಮಕರಣ ಮಾಡಲು ಸರ್ಕಾರ ಮುಂದಾಗುತ್ತಿದೆ.
ಸರ್ಕಾರ ನಿರ್ಧಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಇತಿಹಾಸ ತಜ್ಞ ಪ್ರೊ.ನಂಜೇರಾಜ ಅರಸ್, ಓಟ್ ಬ್ಯಾಂಕಿಗಾಗಿ ಧರ್ಮ ದ್ವೇಷವನ್ನು ಮುಂದಿಟ್ಟು ಆರತಿಯ ಹೆಸರನ್ನು ಬದಲಾಯಿಸಿದ ಕೂಡಲೇ ದೇವರು ಮೆಚ್ಚುತ್ತಾನೆಯೆ ಎಂದು ಪ್ರಶ್ನಿಸಿದರು.
1763ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮೈಸೂರು ಸಂಸ್ಥಾನದ ರಾಜನಾದ ಟಿಪ್ಪುಸುಲ್ತಾನ್ ಐತಿಹಾಸಿಕ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂದಿನಿಂದ ಸಂರಕ್ಷಣೆ ಒದಗಿಸಿದ ನೆನಪಿಗಾಗಿ ಈ ದೇವಸ್ಥಾನದಲ್ಲಿ ಪ್ರತಿ ದಿನ ಸಂಜೆ ಸಲಾಮ್ ಮಂಗಳಾರತಿ ನಡೆಸಿ ಟಿಪ್ಪು ಸುಲ್ತಾನ್ ಗೆ ಗೌರವ ಸಲ್ಲಿಸಲಾಗುತ್ತಿತ್ತು. ಸದ್ಯ ಸಂಘಪರಿವಾರದ ಒತ್ತಡಕ್ಕೆ ಮಣಿದು ಸಲಾಮ್ ಮಂಗಳಾರತಿ ಹೆಸರನ್ನು ಬದಲಿಸಲು ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಿರ್ಧಾರದಿಂದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ದೇವಾಲಯದಲ್ಲಿ ಜಾತ್ರಾ ಮಹೋತ್ಸವ ವೇಳೆ ಸಲಾಮ್ ಮಂಗಳಾರತಿ ಧಾರ್ಮಿಕ ದತ್ತಿ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ, ಕಾರ್ಯನಿರ್ವಹಣಾಧಿಕಾರಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಗೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿತ್ತು.
ಒಂದೇ ಲಿಂಕ್‌ನಲ್ಲಿ ಜನಶಕ್ತಿ ಮೀಡಿಯಾದ ಸೋಶಿಯಲ್ ಮೀಡಿಯಾ ಫ್ಲಾಟ್‌ಫಾರ್ಮ್‌ನ್ನು ನೋಡಬಹುದು