ಅಂಬೇಡ್ಕರ್ ನಗರ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಅಲ್ಲದೆ, ಮಹಿಳೆಯರನ್ನು ನಿಂದಿಸಿರುವ ಘಟನೆ ಜರುಗಿದೆ. ಇದರ ವಿಡಿಯೋ ಒಂದು ವೈರಲ್ ಆಗಿದೆ.
ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್ಪುರದಲ್ಲಿ ಕೆಲವು ದಿನಗಳ ಹಿಂದೆ ಡಾ ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಘಟನೆ ನಡೆದ ಸ್ಥಳದಲ್ಲಿ ಭಾನುವಾರ(ನವೆಂಬರ್ 06) ಪ್ರತಿಭಟನೆ ನಡೆಸುತ್ತಿದ್ದರು.
Ambedkar Nagar, UP : A video of #UttarPradesh policemen raining lathis on women and shouting abuses has sparked allegations of police excesses. The #UPPolice claim they used "minor force" after the #women started throwing stones at them and their vehicles.@UPGovt @Uppolice pic.twitter.com/ZnoOIFvqnm
— THE FREE MEDIA (@THEFREEMEDIA2K) November 7, 2022
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಹಿಳೆಯರ ವಿರುದ್ಧ ಪೊಲೀಸರು ಲಾಠಿ ಪ್ರಯೋಗಿಸಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸಿ ನಿಂದಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಪೊಲೀಸರ ಅತಿರೇಕದ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.
ಪೊಲೀಸರ ಪ್ರಕಾರ, ಕೆಲವು ಪ್ರತಿಭಟನಾಕಾರರು ಹಿರಿಯ ಅಧಿಕಾರಿ ಸೇರಿದಂತೆ ಪೊಲೀಸರ ಮೇಲೆ ಕಲ್ಲು ಎಸೆಯಲು ಆರಂಭಿಸಿದ್ದರಿಂದ ಬಲ ಪ್ರಯೋಗ ಮಾಡಬೇಕಾಯಿತು ಎಂದು ಪೊಲೀಸರ ಹೇಳಿಕೆಯಾಗಿದೆ.
ಮಹಿಳೆಯರು ನಮ್ಮ ಮೇಲೆ ಹಾಗೂ ನಮ್ಮ ವಾಹನಗಳ ಮೇಲೆ ಕಲ್ಲು ಎಸೆಯಲು ಆರಂಭಿಸಿದ ನಂತರ ನಾವು “ಸಣ್ಣ ಬಲ” ಪ್ರಯೋಗವನ್ನು ಮಾಡಿದ್ದೇವೆ ಎಂದು ಅಂಬೇಡ್ಕರ್ ನಗರದ ಹಿರಿಯ ಪೊಲೀಸ್ ಅಧಿಕಾರಿ ಅಜಿತ್ ಕುಮಾರ್ ಸಿನ್ಹಾ ಹೇಳಿದ್ದಾರೆ.