ಅಧಿಕಾರಿಗಳ ನಿರ್ಲಕ್ಷ್ಯ; ವಿದ್ಯುತ್‌ ತಗುಲಿ ಇಬ್ಬರು ಗುತ್ತಿಗೆ ಕಾರ್ಮಿಕರು ದುರ್ಮರಣ

ಬೆಳಗಾವಿ: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾಮಗಾರಿ ಕೆಲಸದಲ್ಲಿ ತೊಡಗಿಕೊಂಡಿದ್ದ ವೇಳ ವಿದ್ಯುತ್‌ ಪ್ರವಹಿಸಿ ಇಬ್ಬರು ಗುತ್ತಿಗೆ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನಡೆದಿದೆ.

ಬಳ್ಳಿಗೇರಿ ಗ್ರಾಮದಿಂದ ದೇವನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ನೆನ್ನೆ(ನವೆಂಬರ್‌ 12) ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕಾರ್ಮಿಕರು ವಿದ್ಯುತ್ ಕಂಬ ಏರಿ ದುರಸ್ತಿ ಮಾಡುತ್ತಿದ್ದ ವೇಳೆ ಹನುಮಂತ ಮಗದುಮ್(34) ಹಾಗೂ ಅಶೋಕ್ ಮಾಳಿ(36) ಎಂಬವರಿಗೆ ವಿದ್ಯುತ್‌ ಪ್ರವಹಿಸಿದೆ. ಇದರಿಂದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಮೃತರು ಗುತ್ತಿಗೆ ಆಧಾರದ ಮೇಲೆ ಹೆಸ್ಕಾಂ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ವಿದ್ಯುತ್ ವಿತರಣಾ ಕೇಂದ್ರದ ಶಾಖಾಧಿಕಾರಿ, ಸ್ಟೇಷನ್ ಆಪರೇಟರ್ ನಿರ್ಲಕ್ಷ್ಯದಿಂದ ಕಾರ್ಮಿಕರು ಸಾವನ್ನಪ್ಪಿರುವ ಆರೋಪವಿದೆ. ಈ ದುರಂತಕ್ಕೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತರು ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ನೇಮಕವಾಗಿದ್ದರು. ಇವರು ರಾಯಭಾಗ ತಾಲೂಕಿನ ಹಿಡಕಲ್ ಗ್ರಾಮದ ನಿವಾಸಿಗಳಾಗಳಾಗಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Donate Janashakthi Media

Leave a Reply

Your email address will not be published. Required fields are marked *