ಬೆಂಗಳೂರು: ಸಮಾನ ಮನಸ್ಕ ದಲಿತ ಸಂಘಟನೆಗಳೆಲ್ಲಾ ಒಟ್ಟುಗೂಡಿ ಬಾಬಾ ಸಾಹೇಬ ಅಂಬೇಡ್ಕರ್ ರವರ 66ನೇ ಮಹಾ ಪರಿನಿರ್ವಾಣ ದಿನವಾದ ಡಿಸೆಂಬರ್ 6ರಂದು ‘ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ’ ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶಮಾಡುತ್ತಿರುವ ಬಿ.ಜೆ.ಪಿ.ಯ ಸರ್ವಾಧಿಕಾರಿ ದುರಾಡಳಿತದ ವಿರುದ್ಧ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದಲ್ಲಿ “ದಲಿತ ಸಾಂಸ್ಕೃತಿಕ ಪ್ರತಿರೋಧ ಹಾಗೂ ಬೃಹತ್ ಪ್ರತಿಭಟನಾ ಸಮಾವೇಶ”ವನ್ನು ಹಮ್ಮಿಕೊಳ್ಳಲಾಗಿದೆ.
ಬೃಹತ ಸಮಾವೇಶದಲ್ಲಿ ರಾಜ್ಯದಾದ್ಯಂತ ಎಲ್ಲಾ ತಾಲೂಕು, ಜಿಲ್ಲೆಗಳಿಂದ ಸುಮಾರು 2 ಲಕ್ಷ ಜನಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನಸಾಗರ ಹರಿದು ಬರದಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಕಾರ್ಯಕ್ರಮಕ್ಕೆ ತಳಸಮುದಾಯಗಳಾದ ದಲಿತರು, ಆದಿವಾಸಿಗಳು, ಅಲೆಮಾರಿಗಳು, ಶೂದ್ರರು, ಮಹಿಳೆಯರು, ರೈತರು, ಕಾರ್ಮಿಕರು, ಕುಶಲಕರ್ಮಿಗಳು ಹಾಗೂ ವಿದ್ಯಾರ್ಥಿ-ಯುವಜನರು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಶ್ರೀಮತಿ ರಮಾಬಾಯಿ ಅಂಬೇಡ್ಕರ್ (ಡಾ||ಬಿ.ಆರ್. ಅಂಬೇಡ್ಕರ್ ಮೊಮ್ಮಗಳು, ಮುಂಬೈ), ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್, ಖ್ಯಾತ ರಂಗಭೂಮಿ ನಿರ್ದೇಶಕ ಸಿ. ಬಸವರಂಗಯ್ಯ, ಇವರುಗಳು ಬೃಹತ್ ಸಮಾವೇಶದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಲಿದ್ದಾರೆ.
ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಎನ್ ವೆಂಕಟೇಶ ಕೋಲಾರ, ಡಾ. ಡಿ.ಜಿ ಸಾಗರ, ಎನ್ ಮುನಿಸ್ವಾಮಿ, ಮಾವಳ್ಳಿ ಶಂಕರ್, ಲಕ್ಷ್ಮೀನಾರಾಯಣ ನಾಗವಾರ, ಎಂ ಸೋಮಶೇಖರ(ಹಾಸನ), ಗುರುಪ್ರಸಾದ ಕೆರಗೋಡು,(ಮಂಡ್ಯ) ಅಣ್ಣಯ್ಯ, ಜಿಗಣಿ ಶಂಕರ್, ವಿ. ನಾಗರಾಜ(ಬೆಂಗಳೂರು), ಅರ್ಜುನ್ ಭದ್ರೆ, ಎಸ್.ಆರ್. ಕೊಲ್ಲೂರ, ಕಲಬುರಗಿ ಇವರುಗಳು ದಲತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನ ಸಮಿತಿ ಮುಖಂಡರು ವೇದಿಕೆಯ ಮೇಲೆ ಅತಿಥಿಗಳಾಗಿ ಭಾಗವಹಿಸದ್ದಾರೆ.
ಬೃಹತ್ ಸಮಾವೇಶದ ಸಭೆ ಪ್ರಾರಂಭವಾಗುವ ಮುಂಚೆ “ದಲಿತರ ಸಾಂಸ್ಕೃತಿಕ ಪ್ರತಿರೋಧʼʼ ಕುರಿತಂತೆ ರಚಿಸಲಾಗಿರುವ ಸಾಂಸ್ಕೃತಿಕ ಸಮಿತಿಯ ಮುಖಂಡರಾದ ಪಿಚ್ಚಳ ಶ್ರೀನಿವಾಸ ಮತ್ತು ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಬೃಹತ ಸಮಾವೇಶದಲ್ಲಿ, ರಾಜ್ಯದಾದ್ಯಂತ ಎಲ್ಲಾ ತಾಲೂಕು, ಜಿಲ್ಲೆಗಳಿಂದ ದಲಿತರು, ಆದಿವಾಸಿಗಳು, ಅಲೆಮಾರಿಗಳು, ಶೂದ್ರರು, ಮಹಿಳೆಯರು, ರೈತರು, ಕಾರ್ಮಿಕರು, ಕುಶಲಕರ್ಮಿಗಳು ಹಾಗೂ ವಿದ್ಯಾರ್ಥಿ-ಯುವಜನರು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.