ಬೆಂಗಳೂರು: ಸ್ಯಾಂಟ್ರೋ ರವಿ ಪ್ರಕರಣಗಳನ್ನು ಸಿಐಡಿಗೆ ವರ್ಗಾಹಿಸಲು ನಿರ್ದೇಶಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ವಿಷಯ ತಿಳಿಸಿದ ಅವರು, ‘ವಂಚಕ ಎನ್ನಲಾದ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ತನಿಖೆಗೆ ರಾಜ್ಯ ಸರ್ಕಾರ ಸಿಐಡಿ ನೀಡಲು ಆದೇಶ ನೀಡಿದೆ ಎಂದರು.
ವಂಚಕ, ಪಿಂಪ್ ಸ್ಯಾಂಟ್ರೊ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಈ ನಡುವೆ ಸ್ಯಾಂಟ್ರೋ ರವಿಗೆ ನ್ಯಾಯಾಂಗ ಬಂಧನದ ವಿಚಾರದಲ್ಲಿ ನ್ಯಾಯಾಧೀಶ ಮುಂದೆ ಸರ್ಕಾರ ಆಕ್ಷೇಪ ಮಾಡಲಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿದ್ದವು.
ಇದನ್ನು ಓದಿ: ತಲೆಮರಿಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ ಪೊಲೀಸರು
ಮೈಸೂರಿನ ವಿಜಯನಗರ ಠಾಣೆಯಲ್ಲಿ ದಾಖಲಾಗಿದ್ದ ಮೂರು ಪ್ರಕರಣ, ಕಾಟನ್ ಪೇಟೆ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣ, ರವಿ ಪತ್ನಿ ದಾಖಲಿಸಿದ್ದ ಪ್ರಕರಣ, ವರ್ಗಾವಣೆ ಮತ್ತು ವೇಶ್ಯಾವಾಟಿಕೆ ದಂಧೆ ಪ್ರಕರಣಗಳೂ ಸೇರಿದಂತೆ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ಎಲ್ಲ ಪ್ರಕರಣಗಳನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಗುಜರಾತ್ನಲ್ಲಿ ಬಂಧಿಸಲಾದ ಸ್ಯಾಂಟ್ರೊ ರವಿ ಮತ್ತು ಇತರ ಆರೋಪಿಗಳನ್ನು ಎರಡು ದಿನಗಳ ಹಿಂದೆ ನ್ಯಾಯಾಧೀಶರ ನಿವಾಸಕ್ಕೆ ಪೊಲೀಸರು ಹಾಜರುಪಡಿಸಿದ್ದರು. ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಸೂಚಿಸಿದರು. ಇಂದು ಮತ್ತೆ ಕೋರ್ಟ್ಗೆ ಆರೋಪಿಗಳನ್ನು ಹಾಜರುಪಡಿಸಲಾಯಿತು. ಪೊಲೀಸರ ವಶಕ್ಕೆ ನೀಡಿದ ನ್ಯಾಯಾಲಯ ಜನವರಿ 25ರ ತನಕ ನ್ಯಾಯಾಂಗ ಬಂಧನಕ್ಕೆ ವಹಿಸಿದೆ.
ಇದನ್ನು ಓದಿ: ನಾನು ಬಿಜೆಪಿ ಕಾರ್ಯಕರ್ತ, ವರ್ಗಾವಣೆ ದಂಧೆ ನಿಜ ಎಂದು ಒಪ್ಪಿಕೊಂಡಿದ್ದ ಸ್ಯಾಂಟ್ರೋ ರವಿ
ಸರ್ಕಾರಿ ವಕೀಲರು ಮೈಸೂರು ಸತ್ರ ಮತ್ತು ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಪ್ರಕರಣವನ್ನು ಸಿಐಡಿಗೆ ವಹಿಸಲು ಮನವಿ ಮಾಡಿದರು. ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲವೆಂದು ನ್ಯಾಯಾಲಯ ತಿಳಿಸಿದೆ. ಅಲ್ಲದೆ, ಸಿಐಡಿಗೆ ವಹಿಸುವುದು ಸರ್ಕಾರದ ಕೆಲಸ, ಸೂಕ್ತ ದಾಖಲಾತಿಗಳ ಜೊತೆ ಅರ್ಜಿ ಸಲ್ಲಿಕೆ ಮಾಡಿ ಎಂದು ತಿಳಿಸಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ