ತ್ರಿಪುರ ವಿಧಾನಸಭಾ ಚುನಾವಣೆ; ಮತದಾನ ಆರಂಭ-ಬಿಗಿ ಭದ್ರತೆ

ಅಗರ್ತಲಾ: ತ್ರಿಪುರಾ ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತಗಟ್ಟೆ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪ್ರತಿ ಮತಗಟ್ಟೆಗಳ ಬಳಿಯೂ ಭದ್ರತೆ ನಿಯೋಜಿಸಲಾಗಿದೆ. ಮುಖ್ಯ ಚುನಾವಣಾ ಅಧಿಕಾರಿ ಗಿಟ್ಟೆ ಕಿರಣ್ ಕುಮಾರ್ ದಿನಕರ್ರೋ ತಿಳಿಸಿದ್ದಾರೆ.

ಇಂದು(ಫೆಬ್ರವರಿ 16) ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದೆ. 11 ಸಾವಿರ ಪೊಲೀಸ್ ಸಿಬ್ಬಂದಿ ಹಾಗೂ 400 ಸಿಆರ್‌ಪಿಎಫ್ (ಸಿಆರ್‌ಪಿಎಫ್‌) ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಬೆಳಗ್ಗೆ 11 ಗಂಟೆ ವೇಳೆಗೆ ಶೇ. 31.2 ಮತದಾನ ನಡೆದಿದೆ ಎಂದು ವರದಿಯಾಗಿದೆ. ತೃತೀಯ ಸಹ ಮತದಾನದಲ್ಲಿ ಉತ್ಸಾಹದಿಂದ ಭಾಗಿಯಾಗಿರುವುದು ಕಂಡು ಬಂದಿದೆ. ಚುನಾವಣಾ ಭದ್ರತೆಗಾಗಿ

ಚುನಾವಣೆಯಲ್ಲಿ ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದು ಆರು ಸ್ಥಾನಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

ಕಮ್ಯುನಿಸ್ಟ್ ಪಕ್ಷಗಳ ಜೊತೆ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಂಡಿದ್ದು 13 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಎಡ ಪಕ್ಷಗಳಾದ ಸಿಪಿಐ(ಎಂ), ಸಿಪಿಐ, ಫಾರ್ವರ್ಡ್ ಬ್ಲಾಕ್, ಆರ್‌ಎಸ್‌ಪಿ ಪಕ್ಷಗಳು 47 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿವೆ. ಸ್ಥಳೀಯ ಪಕ್ಷ ತ್ರಿಪುರಾ ಮೊರ್ಚಾ 42 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ.

ಸುಮಾರು 3,337 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಒಟ್ಟು ಮತಗಟ್ಟೆಗಳಲ್ಲಿ 1,100 ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು 28 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಮತದಾರರು ಸರತೀ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *