ಸಿಸೋಡಿಯಾ ಬಂಧನ ಬೆನ್ನಲ್ಲೇ ಹಲವು ಎಎಪಿ ನಾಯಕರ ಬಂಧನ!

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮನೀಶ್ ಸಿಸೋಡಿಯಾ ಬಂಧನದ ನಂತರ, ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಗೋಪಾಲ್ ಸಿಂಗ್ ಸೇರಿದಂತೆ ಹಲವು ನಾಯಕರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಮ್ ಆದ್ಮಿ ಪಕ್ಷದ ಶಾಸಕ ಸೌರಭ್ ಭಾರದ್ವಾಜ್ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,  ಬೆಳಗ್ಗೆಯಿಂದ ನಾವು ಪ್ರತಿ ಸಂದರ್ಭದಲ್ಲೂ ದೆಹಲಿ ಪೊಲೀಸರೊಂದಿಗೆ ಸಹಕರಿಸಿದ್ದೇವೆ. ಇದೀಗ ನಮ್ಮ ಸಂಸದ ಸಂಜಯ್ ಸಿಂಗ್, ಸಚಿವ ಗೋಪಾಲ್ ರೈ ಸೇರಿದಂತೆ ಹಲವು ಶಾಸಕರನ್ನು ಬಂಧಿಸಿದ್ದಾರೆ. ಸರ್ವಾಧಿಕಾರ ಮತ್ತು ತುರ್ತು ಪರಿಸ್ಥಿತಿಯ ಬಗ್ಗೆ ನಾವು ಒಂದೇ ರೀತಿಯ ಮಾತುಗಳನ್ನು ಕೇಳುತ್ತಿದ್ದೆವು ಎಂದು ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಇಂತಹ ಬಂಧನಗಳು ನಡೆದರೆ ದೇಶ, ಪ್ರಜಾಪ್ರಭುತ್ವ ಏನಾಗಬಹುದು ಎಂದು ಪ್ರಶ್ನಿಸಿದ್ದಾರೆ?

ಮನೀಶ್ ಸಿಸೋಡಿಯಾ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷ ಸೋಮವಾರ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಿದೆ. ಮನೀಶ್ ಸಿಸೋಡಿಯಾ ಅವರು ಯಾವಾಗಲೂ ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ, ಈಗ ನಾವೆಲ್ಲರೂ ನಮ್ಮ ಕರ್ತವ್ಯವನ್ನು ಮಾಡಬೇಕಾದ ಸಮಯ ಬಂದಿದೆ ಎಂದು ದೆಹಲಿ ಸರ್ಕಾರದ ಸಚಿವ ಗೋಪಾಲ್ ರೈ ಹೇಳಿದ್ದಾರೆ.

‘ನಾನು ಕೆಲ ತಿಂಗಳ ಕಾಲ ಜೈಲಿನಲ್ಲಿರಬಹುದು. ಆದರೆ, ಆ ಬಗ್ಗೆ ನಾನು ತಲೆಕಡಿಸಿಕೊಂಡಿಲ್ಲ’ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಆ ಆರೋಪಗಳಿಂದ ಮುಕ್ತವಾಗಿ ಹೊರಬರುವ ವಿಶ್ವಾಸವಿದೆ ಎಂದು ಅವರು ದೆಹಲಿ ಜನರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *