ಬೆಂಗಳೂರು : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡಾವಳಿಯನ್ನು ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರವ ಗುತ್ತಿಗೆ ನೌಕರರಿಗೆ ಸಂಭಾವನೆ (Remuneration ) ಅನ್ನು ದಿನಾಂಕ 01-04-2023ರಿಂದ ಜಾರಿಗೆ ಬರುವಂತೆ ಶೇ.15ರಷ್ಟು ಹೆಚ್ಚಿಸಿದೆ ಎಂದಿದ್ದಾರೆ.
ಇದನ್ನೂ ಓದಿ : ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಂದ ‘ಬೆಂಗಳೂರು ಚಲೋ’
ಇನ್ನೂ ಶೇ.15ರಷ್ಟು ವೇತನ ಹೆಚ್ಚಳದ ಆದೇಶವು ಒಳಗುತ್ತಿಗೆ, ಗುತ್ತಿಗೆ ನೌಕರರಿಗೆ ಮಾತ್ರವೇ ಅನ್ವಯವಾಗಲಿದೆ. ಇದರ ಹೊರತಾಗಿ ಹೊರಗುತ್ತಿಗೆ ನೌಕರರಿಗೆ ಅನ್ವಯಿಸುವುದಿಲ್ಲ. ಈ ಶೇ.15ರಷ್ಟು ವೇತನ ಹೆಚ್ಚಳವು ಎನ್ ಹೆಚ್ ಎಂಬಿಬಿಎಸ್, ಆಯುಷ್, ಆರ್ ಬಿ ಎಸ್ ಕೆ, ಡೆಂಟಲ್ ಸರ್ಜನ್ ಅವರು 5 ವರ್ಷ ಮೇಲ್ಪಟ್ಟಿ ನಿರಂತರ ಸೇವೆ ಸಲ್ಲಿಸಿದ್ದರೇ ಅವರಿಗೂ ಅನ್ವಯಿಸಲಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ನೀಡಿರುವಂತ ಸಚಿವ ಡಾ.ಕೆ ಸುಧಾಕರ್, ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ , ರಾಷ್ಟ್ರೀಯ ಆರೋಗ್ಯ ಮಿಷನ್ ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ.
ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, NHM ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ.
1/2 pic.twitter.com/oAhhHcl8aC
— Dr Sudhakar K (@mla_sudhakar) March 4, 2023
ಪಿ.ಎನ್.ಶ್ರೀನಿವಾಸಾಚಾರಿ ಸಮಿತಿಯ ಶಿಫಾರಸ್ಸಿನನ್ವಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ಮನವಿಗೆ ಸ್ಪಂದಿಸಿ ವೇತನ ಹೆಚ್ಚಳ ಮಾಡಿದ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೌಕರರ ಪರವಾಗಿ ಕೃತಜ್ಞತೆಗಳನ್ನು ತಿಳಿಸಿದ್ದಾರೆ.