ಹುಬ್ಬಳ್ಳಿಯ ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ; ರೂ.3 ಕೋಟಿ ನಗದು ವಶ

ಹುಬ್ಬಳ್ಳಿ: ಉದ್ಯಮಿಯೊಬ್ಬರ ಮನೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಬರೋಬ್ಬರಿ ರೂ.3 ಕೋಟಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ಉದ್ಯಮಿ ರಮೇಶ್ ಬೊಣಗೇರಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು. ರಮೇಶ್ ಬೊಣಗೇರಿ ಕೃಷಿ ಇಲಾಖೆಗೆ ರಾಸಾಯನಿಕ ಸರಬರಾಜು ಮಾಡುತ್ತಿದ್ದ ಉದ್ಯಮಿ.

ರಮೇಶ್ ಬೊಣಗೇರಿ ಮನೆಯಲ್ಲಿ ವಶಕ್ಕ ಪಡೆದುಕೊಂಡಿರುವ ಹಣದ ಮೂಲದ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು ಅದನ್ನು ಹಿಂತಿರಿಗಿಸುವ ಸಾಧ್ಯತೆ ಇದೆ. ಇಲ್ಲದಿದ್ದರೆ ಆದಾಯ ತೆರಿಗೆ ಇಲಾಖೆ ಈ ಪ್ರಕರಣದ ತನಿಖೆ ನಡೆಸಲಿದೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್ ನಿವಾಸಗಳಲ್ಲಿ ಲೋಕಾಯುಕ್ತ ದಾಳಿ ವೇಳೆ 8 ಕೋಟಿ ರೂ. ಹೆಚ್ಚು ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿರುವಾಗಲೇ ಉದ್ಯಮಿಯೊಬ್ಬರ ಮನೆಯಲ್ಲಿ ಅಪಾರ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *