ಕೊಚ್ಚಿ: ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಕುರಿತಾದ ಸುಳ್ಳು ಸುದ್ದಿಯೊಂದನ್ನು ಪ್ರಸಾರ ಮಾಡಿದ ಮಲಯಾಳಂ ಸುದ್ದಿ ವಾಹಿನಿ ಏಷ್ಯಾನೆಟ್ ನ್ಯೂಸ್ ಕಛೇರಿಗೆ ಮುತ್ತಿಗೆ ಹಾಕಿದ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಕಾರ್ಯಕರ್ತರ ಸಂಬಂಧಪಟ್ಟವರು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ಕೇರಳದ ಎಸ್ಎಫ್ಐ ವಿದ್ಯಾರ್ಥಿ ಘಟಕದ ಸುಮಾರು 30ಕ್ಕೂ ಹೆಚ್ಚು ಕಾರ್ಯಕರ್ತರು ಸುಳ್ಳು ಸುದ್ದಿ ಪ್ರಸಾರದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರ್ಚ್ 03ರ ರಾತ್ರಿ 8 ಗಂಟೆ ಸುಮಾರಿಗೆ ವಾಹಿನಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿ: ವಲಸೆ ಕಾರ್ಮಿಕರ ಬಗ್ಗೆ ಸುಳ್ಳು ಹೇಳಿಕೆ; ತಮಿಳುನಾಡಿನಲ್ಲಿ ಬಿಜೆಪಿ ನಾಯಕನ ವಿರುದ್ಧ ಪ್ರಕರಣ
ಉತ್ತರ ಕೇರಳದ ಶಾಲೆಯೊಂದರಲ್ಲಿ 10ಕ್ಕೂ ಅಧಿಕ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಸುಳ್ಳುಸುದ್ದಿಯನ್ನು ಪ್ರಸಾರ ಮಾಡಿದೆ ಎಂದು ಆರೋಪಿಸಿದ ಎಸ್ಎಫ್ಐ ಕಾರ್ಯಕರ್ತರು ಮಾಧ್ಯಮ ಸಂಸ್ಥೆಯ ವಿರುದ್ಧ ಕೊಚ್ಚಿಯಲ್ಲಿರುವ ಏಷ್ಯಾನೆಟ್ ನ್ಯೂಸ್ ಪ್ರಾದೇಶಿಕ ಕಚೇರಿಯವರೆಗೆ ಮೆರವಣಿಗೆ ಆಯೋಜಿಸಿತ್ತು ಈ ಬಗ್ಗೆ ಎಸ್ಎಫ್ಐ ಎರ್ನಾಕುಲಂ ಜಿಲ್ಲಾ ಸಮಿತಿಯ ಕಾರ್ಯಕರ್ತರು ಭಾಗಿಯಾಗಿದ್ದರು.
ರಾಜ್ಯದ ಶಾಲೆಯೊಂದರಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಅಪ್ರಾಪ್ತ ಬಾಲಕಿಯನ್ನು ಬಳಸಿಕೊಂಡು ಸುಳ್ಳು ಸುದ್ದಿ ಸೃಷ್ಟಿಸಿದೆ ಎಂಬ ಆರೋಪ ಸುದ್ದಿ ವಾಹಿನಿಯ ವಿರುದ್ಧ ಕೇಳಿ ಬಂದಿದೆ. ಇದರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ.
ಎಸ್ಎಫ್ಐ ಕಾರ್ಯಕರ್ತರ ವಿರುದ್ಧ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿರುವ ಸುದ್ದಿವಾಹಿನಿಯರು ಪೊಲೀಸರು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಎಸ್ಎಫ್ಐ ಕ್ರಮವನ್ನು ಟೀಕಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಲು ಕೇರಳ ಸರ್ಕಾರವನ್ನು ಒತ್ತಾಯಿಸಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ