ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿಯಲ್ಲಿರುವ ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದಡಿ ಪ್ರಾಂಶುಪಾಲರು ಸೇರಿ ಐವರನ್ನು ಬಂಧಿಸಲಾಗಿದೆ.
ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಾಂಶುಪಾಲೆ ಗೀತಾ ಬಾಯಿ, ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಪುನೀತ್, ಶಿಕ್ಷಕ ಶಿವಯ್ಯ, ಅಟೆಂಡರ್ ಶೃತಿ, ಹಾಗೂ ಗಣಿತ ಶಿಕ್ಷಕ ವಿಜಯ್ ಕುಮಾರ್ ಎಂಬುವರನ್ನು ಬಂಧಿಸಲಾಗಿದೆ. ಕೃತ್ಯ ಎಸಗುವುದು ಎಷ್ಟು ತಪ್ಪೋ ಪ್ರಕರಣದ ಮಾಹಿತಿ ತಿಳಿದು ಸುಮ್ಮನಿದ್ದದ್ದು ಕೂಡ ಅಪರಾಧವೇ ಹೀಗಾಗಿ ಐವರನ್ನು ಬಂಧಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಾರ್ಚ್ 7ರಂದು ಈ ಘಟನೆ ನಡೆದಿದ್ದು, ವಸತಿ ಶಾಲೆಯಲ್ಲಿ ಸೌಲಭ್ಯಗಳನ್ನು ಕಲ್ಪಸಬೇಕೆಂದು ಮಕ್ಕಳು ದಿಢೀರ್ ಪ್ರತಿಭಟನೆಗಿಳಿದಿದ್ದರು. ಈ ವೇಳೆ ಕೆಲವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಸಂಬಂಧ ಪ್ರಾಂಶುಪಾಲರಿಗೆ, ಶಿಕ್ಷಕರಿಗೆ ದೂರು ನೀಡಿದರೂ ಪ್ರಯೋಜನ ಆಗಿಲ್ಲ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದರು.
ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲೂರು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಐವರನ್ನು ಬಂಧಿಸಿದೆ.
ವಸತಿ ಶಾಲೆಯೆ ಮೇಲ್ವಿಚಾರಕಾರರ ನಿರ್ಲಕ್ಷ್ಯವೂ ಇದಕ್ಕೆ ಕಾರಣವೆಂದು ತಿಳಿದು ಬಂದಿದ್ದು, ಬಂಧಿತ ಆರೋಪಿಗಳನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಐವರ ವಿರುದ್ಧ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಗೆ ಒಳಪಟ್ಟ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ನಡೆದಿರುವ ದೌರ್ಜನ್ಯ ಕುರಿತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ