ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಇದೇ 24ರವರೆಗೆ ವಿಸ್ತರಿಸಿದೆ.
ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ’ಗಳ ವಿಚಾರಣೆ ನಡೆಸುವ ಹೈಕೋರ್ಟ್ನ ವಿಶೇಷ ನ್ಯಾಯಪೀಠದ ನ್ಯಾ.ಕೆ.ನಟರಾಜನ್ ಪೀಠದಲ್ಲಿ ಶುಕ್ರವಾರ ವಿಚಾರಣೆಗೆ ನಿಗದಿಯಾಗಿತ್ತು.
ಇದನ್ನೂ ಓದಿ : ತೆರಿಗೆ ವಂಚನೆ : ಡಿಕೆಶಿ ವಿರುದ್ಧದ ಮೂರು ಪ್ರಕರಣಗಳು ವಜಾಮಾಡಿದ ಹೈಕೋರ್ಟ್
ಆದರೆ, ಕಾಲಾವಕಾಶದ ಕೊರತೆಯಿಂದ ನ್ಯಾಯಪೀಠ ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಿತು. ಅಲ್ಲಿಯವರೆಗೆ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆ ಆದೇಶವನ್ನು ವಿಸ್ತರಿಸಿತು. ಸಿಬಿಐ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿದೆ. ‘ಈ ಎಫ್ಐಆರ್ ರದ್ದುಗೊಳಿಸಲು’ ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.