ಸಂಭಾಲ್: ಇಲ್ಲಿನ ಶೀತಲೀಕರಣ ಘಟಕ ಕಟ್ಟಡದ ಛಾವಣಿಯೂ ಕುಸಿದು ಬಿದ್ದ ಪರಿಣಾಮ ಮೃತಪಟ್ಟಿರುವವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಹಲವು ಮಂದಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಮಾಲೀಕರು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚಂಡೌಸಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ರಸ್ತೆಯಲ್ಲಿ ಕಟ್ಟಡ ಮೇಲ್ಜಾವಣಿ ಕುಸಿದಿದೆ. ರಾಜ್ಯ ಸರ್ಕಾರವು ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ., ತೀವ್ರವಾಗಿ ಗಾಯಗೊಂಡವರಿಗೆ ರೂ. 50,000 ಮತ್ತು ಘಟನೆಯಲ್ಲಿ ಗಾಯಗೊಂಡ ಎಲ್ಲರಿಗೂ ಉಚಿತ ಚಿಕಿತ್ಸೆ ಘೋಷಿಸಿದೆ.
ಇದನ್ನು ಓದಿ: ಮಳೆಯಿಂದಾಗಿ ಬೆಂ-ಮೈ ಎಕ್ಸ್ಪ್ರೆಸ್ ಹೈವೆ ಜಲಾವೃತ; ಕೆಟ್ಟುನಿಂತ ಕಾರಿಗೆ ಹಲವು ವಾಹನಗಳ ಡಿಕ್ಕಿ!
ಉತ್ತರಾಖಂಡದ ಹಲ್ದ್ವಾನಿ ಜಿಲ್ಲೆಯಲ್ಲಿ ಶೀತಲೀಕರಣ ಘಟಕದ ಮಾಲೀಕರಾದ ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಅವರನ್ನು ಬಂಧಿಸಲಾಗಿದೆ ಎಂದು ಸಂಭಾಲ್ ಜಿಲ್ಲಾ ಅಧಿಕಾರಿ ಮನೀಶ್ ಬನ್ಸಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಕುಸಿದಿರುವ ಕಟ್ಟಡದ ಅವಶೇಷಗಡಿ 24 ಜನರನ್ನು ಹೊರತೆಗೆಯಲಾಯಿತು ಮತ್ತು ಅವರಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆಸ್ಪತ್ರೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಟ್ಟಡ ಕುಸಿತದ ಹಿಂದಿನ ಕಾರಣಗಳನ್ನು ತನಿಖೆ ಮಾಡಲು ಸಮಿತಿಯನ್ನು ರಚಿಸಿದ್ದಾರೆ.
ಇದನ್ನು ಓದಿ: ಹಿಮಪಾತದಡಿ ಸಿಲುಕಿದ 1000 ಪ್ರವಾಸಿಗರನ್ನು ರಕ್ಷಿಸಿದ ಭಾರತೀಯ ಸೇನೆ
ವಿಭಾಗೀಯ ಆಯುಕ್ತರ ನೇತೃತ್ವದ ಮತ್ತು ಮೊರಾದಾಬಾದ್ನ ಡಿಐಜಿ ಒಳಗೊಂಡ ತನಿಖಾ ಸಮಿತಿಯೂ ಶೀಘ್ರದಲ್ಲಿಯೇ ತನ್ನ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಕೇಳಿದೆ.
ಪೊಲೀಸರ ಪ್ರಕಾರ, ಮೂರು ತಿಂಗಳ ಹಿಂದೆ ಕುಸಿದ ಛಾವಣಿಯನ್ನು ಜಿಲ್ಲಾಡಳಿತದಿಂದ ಅಗತ್ಯ ಅನುಮತಿಯಿಲ್ಲದೆ ನಿರ್ಮಿಸಲಾಗಿದೆ ಮತ್ತು ಶೀತಲೀಕರಣ ಘಟಕದಲ್ಲಿ ಸಂಗ್ರಹವಾಗಿರುವ ಆಲೂಗಡ್ಡೆ ಪ್ರಮಾಣವು ಅದರ ನಿಗದಿತ ಸಾಮರ್ಥ್ಯವನ್ನು ಮೀರಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಭೇಟಿ ನೀಡಿರುವ ರಾಜ್ಯ ಪಶುಸಂಗೋಪನಾ ಸಚಿವ ಧರಂಪಾಲ್ ಸಿಂಗ್ ಭೇಟಿ ನೀಡಿ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಂಭಾಲ್ ಜಿಲ್ಲಾ ತೋಟಗಾರಿಕಾ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ