ಚಂಡೀಗಢ: ಸಿಖ್ ಸಮುದಾಯದ ತೀವ್ರಗಾಮಿ, ಖಾಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್ಪಾಲ್ ಸಿಂಗ್ ಬಂಧನಕ್ಕೆ ಪಂಜಾಬ್ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರೊಂದಿಗೆ ಪಂಜಾಬ್ ಸರ್ಕಾರ ಅಂತರ್ಜಾಲ ಸಂಪರ್ಕ ನಿಷೇಧಿಸಿದ್ದು, ಸೋಮವಾರದವರೆಗೆ ಅಂತರ್ಜಾಲ ಹಾಗೂ ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಜಲಂಧರ್ ಪೊಲೀಸ್ ಕಮಿಷನರ್ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ್ದು, ಕುಲದೀಪ್ ಸಿಂಗ್ ಚಾಹಲ್ ಅಮೃತ್ಪಾಲ್ ಸಿಂಗ್ ಪರಾರಿಯಾಗಿದ್ದು, ನಾವು ಅತನನ್ನು ಹುಡುಕುತ್ತಿದ್ದೇವೆ ಮತ್ತು ನಾವು ಶೀಘ್ರದಲ್ಲೇ ಅವನನ್ನು ಬಂಧಿಸುತ್ತೇವೆ ಎಂದು ತಿಳಿಸಿದರು.
ಇದನ್ನು ಓದಿ: ಭಯೋತ್ಪಾದನೆಯ ವಿರುದ್ಧದ ಹೋರಾಟಗಾರ ಬಲ್ವಿಂದರ್ ಸಿಂಗ್ ಭಿಕಿವಿಂಡ್ ಹತ್ಯೆ
ಸರ್ಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬ್ಯಾಂಕಿಂಗ್ ಸೇವೆಗಳಿಗೆ ಆಸ್ಪತ್ರೆ ಸೇವೆಗಳು ಹಾಗೂ ಇನ್ನಿತರ ಬ್ರಾಡ್ ಬ್ಯಾಂಡ್ ಸೇವೆಗಳನ್ನು ನಿರ್ಬಂಧಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಮೃತ್ಪಾಲ್ ಹಾಗೂ ಸಹಚರರ ವಿರುದ್ಧ ಪಂಜಾಬ್ನಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಅಜನಾಲದಲ್ಲಿ ಪೊಲೀಸರು ಕಳೆದ ವಾರ ಪ್ರಕರಣ ದಾಖಲಿಸಿಕೊಂಡಿದ್ದರು.
ಅಮೃತ್ಪಾಲ್ ಪರವಾಗಿರುವ ಅವರ 78 ಬೆಂಬಲಿಗರನ್ನು ಈಗಾಗಲೇ ಬಂಧಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರೈಫಲ್, ರಿವಾಲ್ವರ್, ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯದಾದ್ಯಂತ ಕಟ್ಟೆಚ್ಚರವಹಿಸಲಾಗಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ