ಹಿಂದೂ ಭಾವನೆಗಳಿಗೆ ಧಕ್ಕೆ ಆರೋಪ : ನಟ ಚೇತನ್‌ ಅಹಿಂಸಾ ಬಂಧನ

ಬೆಂಗಳೂರು : ಉರಿಗೌಡ ನಂಜೇಗೌಡ ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್  ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು ಬಂಧಿಸಲಾಗಿದೆ.

ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ : ಚಿತ್ರನಟ ಚೇತನ್ ವಿರುದ್ಧ ಬ್ರಾಹ್ಮಣ ಮಂಡಳಿಯಿಂದ ದೂರು

ಈ ಪೋಸ್ಟ್ ಅನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರನ್ನು ಆಧರಿಸಿ ಚೇತನ್‌ ಅವರ ವಿರುದ್ಧ ಐಪಿಸಿ ಸೆಕ್ಷನ್‌ 295A ಹಾಗೂ 505B ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ರನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಗಳು ಸದ್ಯ ಲಭ್ಯವಾಗಿದೆ.

Donate Janashakthi Media

Leave a Reply

Your email address will not be published. Required fields are marked *