ಪಾನ್‌ – ಆಧಾರ್‌ ನಂಬರ್ ಲಿಂಕ್‌ ಗಡುವು ಮತ್ತೆ ವಿಸ್ತರಣೆ

ಹೊಸದಿಲ್ಲಿ : ಪಾನ್‌ ಮತ್ತು ಆಧಾರ್‌ ಲಿಂಕ್‌ ಮಾಡದೇ ಕಂಗಾಲಾಗಿದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನ ಒದಗಿಸುವ ಸಲುವಾಗಿ,ಪ್ಯಾನ್‌ ಮತ್ತು ಆಧಾರ್‌ ಲಿಂಕ್‌ ಮಾಡುವ ದಿನಾಂಕವನ್ನು ಜೂನ್‌ 30 – 2023 ರವರೆಗೆ ವಿಸ್ತರಿಸಿದೆ.

ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಪ್ರಕಟಣೆ ಹೊರಡಿಸಿದೆ. 2023 ರರ ಜುಲೈ 1 ರಿಂದ ಲಿಂಕ್‌ ಮಾಡದ ಪಾನ್‌ ಕಾರ್ಡ್‌ ನಿಷ್ಕ್ರಿಯಗೊಳ್ಳುತ್ತದೆ.ಇದನ್ನು 30 ದಿನಗಳ ಒಳಗೆ 1000 ರೂ ಶುಲ್ಕ ಕಟ್ಟಿ ಲಿಂಕ್‌ ಮಾಡಿಸಿ ಮತ್ತೆ ಕಾರ್ಯಗತಗೊಳಿಸಬಹುದು ಎಂದು ಇಲಾಖೆ ಸೂಚಿಸಿದೆ. ಈ ಪ್ರಕ್ರಿಯರಯಿಂದ 80 ವರ್ಷ ದಾಟಿದವರು,ಅನಿವಾಸಿ ಭಾರತೀಯರು ಸೇರಿ ಇನ್ನೂ ಹಲ ವಿಭಾಗಗಳಲ್ಲಿ ಬರುವ ಜನರಿಗೆ ವಿನಾಯ್ತಿ ನೀಡಲಾಗಿದೆ.

ಅವಧಿ ವಿಸ್ತರಣೆ ಮಾಡುವಂತೆ ಮೋದಿಗೆ ಮನವಿ : 
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಲಿಂಕ್ ಮಾಡಲು 2022ರ ಮಾರ್ಚ್ 31ರವರೆಗೆ ಉಚಿತವಾಗಿತ್ತು. 2022ರ ಏಪ್ರಿಲ್ 1ರಿಂದ ₹500 ಪಾವತಿಸಿ ಆಧಾರ್ ಲಿಂಕ್ ಮಾಡಬೇಕಾಗಿತ್ತು. 2022ರ ಜೂನ್‌ನಿಂದ 2023ರ ಮಾರ್ಚ್ 31ರವರಗೆ ಲಿಂಕ್ ಮಾಡಬೇಕಾದರೆ ₹1,000 ಪಾವತಿಸಬೇಕು ಎಂದು ಹೇಳಲಾಗಿತ್ತು. ಒಂದು ವೇಳೆ ಈ ಗಡುವಿನ ಒಳಗೆ ಲಿಂಕ್ ಮಾಡದಿದ್ದರೇ ಆ ನಂತರ ಬರುವ ಅರ್ಜಿಗಳಿಗೆ ₹10 ಸಾವಿರ ದಂಡ ಹಾಕಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಇದೀಗ ಗುಡುವು ಮತ್ತೆ ವಿಸ್ತರಣೆಯಾಗಿರುವುದರಿಂದ ₹1000 ಶುಲ್ಕದೊಂದಿಗೆ ಜೂನ್ 30ರವರಗೆ ಆಧಾರ್‌ ಸಂಖ್ಯೆಯನ್ನು ಪ್ಯಾನ್‌ಗೆ ಲಿಂಕ್ ಮಾಡಬಹುದು.

ಒಬ್ಬನೇ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್‌ ಹೊಂದಿರುವುದನ್ನು ತಪ್ಪಿಸುವ ಉದ್ದೇಶದಿಂದ, ಪ್ಯಾನ್‌ ಜತೆಗೆ ಆಧಾರ್ ಜೋಡಿಸುವ ವ್ಯವಸ್ಥೆಯನ್ನು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿತ್ತು. ಪ್ಯಾನ್‌-ಆಧಾರ್ ಜೋಡಣೆಗೆ ಆಗ ಸರ್ಕಾರವು ಯಾವುದೇ ಶುಲ್ಕ ವಿಧಿಸಿರಲಿಲ್ಲ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಜೋಡಣೆ ಕಾರ್ಯಗತವಾಗಲಿಲ್ಲ. ಹೀಗಾಗಿ ಪ್ಯಾನ್‌-ಆಧಾರ್ ಜೋಡಣೆಗೆ ನೀಡಿದ್ದ ಗಡುವನ್ನು ಸರ್ಕಾರವು ಹಲವು ಬಾರಿ ವಿಸ್ತರಿಸಿತ್ತು. ಕೊನೆಯ ಹಂತದ್ದು ಎಂದು ಹೇಳಿ 2022ರ ಮಾರ್ಚ್‌ನಲ್ಲಿ ವಿಸ್ತರಿಸಿದ ಗಡುವು 2023ರ ಮಾರ್ಚ್‌ 31ಕ್ಕೆ ಕೊನೆಯಾಗಲಿದೆ ಎನ್ನಲಾಗಿತ್ತು.

ಇದನ್ನೂ ಓದಿ ವೋಟರ್ ಐಡಿ ಅಕ್ರಮ: ಆರ್​ಒ ಸಸ್ಪೆಂಡ್, ನಾಲ್ವರು ಪೊಲೀಸ್ ವಶಕ್ಕೆ

‘ಆಧಾರ್‌ ಜೊತೆಗೆ ಜೋಡಣೆಯಾಗದ ಪ್ಯಾನ್‌ಗಳನ್ನು ಇದೇ ಮಾರ್ಚ್‌ 31ರ ನಂತರ ಬಳಸಲು ಸಾಧ್ಯವಿಲ್ಲ. ಆನಂತರ ವ್ಯಾವಹಾರಿಕ ಮತ್ತು ತೆರಿಗೆ ಲಾಭಗಳನ್ನು ಕಳೆದುಕೊಳ್ಳಬೇಕಾಗುತ್ತದೆ’ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಅಧ್ಯಕ್ಷರು ಈಚೆಗೆ ಹೇಳಿದ್ದರು.

 

Donate Janashakthi Media

Leave a Reply

Your email address will not be published. Required fields are marked *