ರೈತರ ಮೇಲಿನ‌ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ತುಮಕೂರು : ತುಮಕೂರಿನ ಗಂಗಯ್ಯನಪಾಳ್ಯದ ರೈತರ ಮೇಲೆ ಅರಣ್ಯ ಇಲಾಖೆಯವರು ನಡೆಸಿದ ದೌರ್ಜನ್ಯ ವಿರೋಧಿಸಿ ತುಮಕೂರಿನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಗಂಗಯ್ಯನಪಾಳ್ಯದಲ್ಲಿ ಬಗರ್ ಹುಕಂ ಸಾಗುವಳಿ ಮಾಡುತ್ತಿದ್ದ ರೈತರ ಮೇಲೆ ಅರಣ್ಯ ಸಿಬ್ಬಂದಿ ಮಾರ್ಚ್ 30 ರಂದು ಮನಸೋ ಇಚ್ಛೇ ಲಾಠಿ ಚಾರ್ಜ್‌ ಮಾಡಿದ್ದರು. ಇದತಿಂದ ನಾಲ್ವರು ರೈತರಿಗೆ ಗಂಭೀರ ಗಾಯಗಳಾಗಿತ್ತು.

ಇದನ್ನು ವಿರೋಧಿಸಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಭೂಮಿಯ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ವಾರದ ಹಿಂದೆ ಆಗಿದ್ದ ತೀರ್ಮಾನ ಉಲ್ಲಂಘಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಏಕಾಏಕಿ ರೈತರ ಬಗರ್ ಹುಕುಂ ಭೂಮಿಯಲ್ಲಿ ಅಕ್ರಮವಾಗಿ ಕಂದಕ ತೆಗೆಯಲು ಪ್ರಾರಂಭಿಸಿದ್ದರು. ಇದನ್ನು ವಿರೋಧಿಸಿ ಸುತ್ತಮುತ್ತಲಿನ ರೈತರು ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ತಾಳ್ಮೆಯಿಂದ ಸ್ಪಂದಿಸುವ ಬದಲಾಗಿ ಅರಣ್ಯ ಇಲಾಖೆ ಸಿಬ್ಬಂದಿ ರೈತರ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ ಎಂದು ಮುಖಂಡರು ದೂರಿದರು. ಅರಣ್ಯ ಇಲಾಖೆಗೆ ಲಾಠಿ ಚಾರ್ಜ್ ಮಾಡುವ ಅಧಿಕಾರ ಕೊಟ್ಟವರು ಯಾರು ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಿಯೋಗ ಭೇಟಿ : ಅರಣ್ಯ ಇಲಾಖೆಯವರು ರೈತರ ಮೇಲೆ ನಡೆಸಿದ ಲಾಠಿಚಾರ್ಜ್ ಮತ್ತು‌ ದೌರ್ಜನ್ಯದಿಂದ ತೀವ್ರ ಗಾಯಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ. ಪಿ.ಆರ್.ಎಸ್ ಗುಬ್ಬಿ ತಾಲ್ಲೂಕು ಅಧ್ಯಕ್ಷರಾದ ದೊಡ್ಡನಂಜಯ್ಯನವರನ್ನು ಪ್ರಾಂತ ರೈತ ಸಂಘ ಹಾಗೂ ಸಿಐಟಿಯು ಸಂಘಟನೆಯ ರಾಜ್ಯ ಮುಖಂಡರು ತುಮಕೂರು‌ ಜಿಲ್ಲಾಸ್ಪತ್ರೆಯಲ್ಲಿ ಭೇಟಿಮಾಡಿ ಆರೋಗ್ಯ ವಿಚಾರಿಸಿದರು.

ನಿಯೋಗದಲ್ಲಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ಕಾರ್ಯದರ್ಶಿ ಸೈಯದ್ ಮುಜೀಬ್, ಪ್ರಾಂತ ರೈಯ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ, ಸಹಕಾರ್ಯದರ್ಶಿ ಎನ್.ಎಲ್.ಭರತ್ ರಾಜ್, ಹಣಕಾಸು ಕಾರ್ಯದರ್ಶಿ ಎಚ್.ಆರ್. ನವೀನ್ ಕುಮಾರ್, ವಿಜ್ಞಾನ ಚಳುವಳಿಯ ಪ್ರಭಾ ಬೆಲವಂಗಲ ಇದ್ದರು.

 

Donate Janashakthi Media

Leave a Reply

Your email address will not be published. Required fields are marked *