ಬೆಳಗಾವಿ : ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, ಇಂದು ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ ಬೂಲಹೊಂಗಲ ತಾಲೂಕಿನ ಹಣಬರಟ್ಟಿ ಗ್ರಾಮದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಗಣಿತ ಪತ್ರಿಕೆಯ ಫೋಟಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮೊನ್ನೆಯಿಂದ (ಮಾರ್ಚ್ 31) ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಂಡು ಪರೀಕ್ಷಾ ಪ್ರಾರಂಭದ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಶ್ನೆ ಪತ್ರಿಕೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು, ಇದೀಗ ಇಂದು ನಡೆದ ಗಣಿತ ವಿಷಯದ ಪ್ರಶ್ನೆಪತ್ರಿಕೆಯೂ ಕೂಡ ಸೋರಿಕೆಯಾಗಿದೆ ಎನ್ನಲಾಗಿದ್ದು, ಈ ಪ್ರಶ್ನೆಪತ್ರಿಕೆಯ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ.
ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆಯಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿದ್ದು, ಪರೀಕ್ಷಾ ಕೇಂದ್ರಕ್ಕೆ ಕ್ಷೇತ್ರಶಿಕ್ಷಣಾಧಿಕಾರಿ ಎಂ,ಎನ್ ಪ್ಯಾಟಿಭೇಟಿ ನೀಡಿ ಪರಿಶೀಲನೆ ನಡೆಸಿ ಸಿಬ್ಬಂದಿಗಳಿಂದ ಮಾಹಿತಿ ಕಲೆಹಾಕಿದ್ದಾರೆ.
ಇದನ್ನೂ ಓದಿ : SSLC Exams 2023: ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ! ಸಾಮಾಜಿಕ ಜಾಲತಾಣದಲ್ಲಿ ವೈರಲ್
ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು ಮಾತ್ರ ಪರೀಕ್ಷಗೆ ಹಾಜರಾಗಿದ್ದರು, ಪರೀಕ್ಷೆ ನಡೆಯುತ್ತಿರುವ ವೇಳೆಯಲ್ಲಿಯೇ ಈ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದಕ್ಕೆ ಶಿಕ್ಷಕರ ಸಹಕಾರ ನೀಡಿದ್ದಾರೆ ಎಂಬ ಆರೋಪವೂ ಕೂಡ ಕೇಳಿಬಂದಿದೆ.
ಇದನ್ನೂ ಓದಿ : ಎಸ್ಎಸ್ಎಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಇನ್ನೂ ಇದೇ ತಿಂಗಳ ಏಪ್ರಿಲ್ 6 ರಂದು ದ್ವಿತೀಯ ಭಾಷೆಗಳಾದ ಇಂಗ್ಲಿಷ್, 10 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ. 12 ರಂದು ತೃತೀಯ ಭಾಷೆಗಳಾದ ಹಿಂದಿ, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ. 15 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.
ಜನಶಕ್ತಿ ಮೀಡಿಯಾ ವಾಟ್ಸಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ