ನವದೆಹಲಿ : ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಏರಿಕೆ ಕಂಡಿದ್ದು, ಪ್ರತಿ 10 ಗ್ರಾಂ ಮೇಲೆ ₹1,025 ಹೆಚ್ಚಳವಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ ₹61,080ರಷ್ಟಾಗಿದೆ.
ವಿದೇಶಿ ಮಾರುಕಟ್ಟೆಯ ಬೆಲೆ ಏರಿಕೆಗೆ ಅನುಗುಣವಾಗಿ ದೇಶಿಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಏರಿಕೆ ಕಂಡಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ಹೇಳಿದೆ.ಮಂಗಳವಾರದ ವಹಿವಾಟು ಅಂತ್ಯಕ್ಕೆ 10 ಗ್ರಾಂ ಚಿನ್ನದ ಬೆಲೆ ₹60,055 ಆಗಿತ್ತು.ಬೆಳ್ಳಿಯ ಬೆಲೆ ಸಹ ₹1,810ರಷ್ಟು ಹೆಚ್ಚಳವಾಗಿದ್ದು, ಪ್ರತಿ ಕೆ.ಜಿ ಬೆಳ್ಳಿ ಬೆಲೆ ₹73,950 ಆಗಿದೆ.’ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ₹61,000 ದಾಟಿರುವುದು ಹೊಸ ಸಾರ್ವಕಾಲಿಕ ಹೆಚ್ಚಳವಾಗಿದೆ’ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.
ಇದನ್ನೂ ಓದಿ : ಇಂದಿನಿಂದ ಯಾವುದು ದುಬಾರಿ ಯಾವುದು ಅಗ್ಗ : ಹೊಸ ಬದಲಾವಣೆ ಏನು ?
ವಿದೇಶಿ ಮಾರುಕಟ್ಟೆಯಲ್ಲಿ ಪ್ರತಿ ಔನ್ಸ್ ಚಿನ್ನ ಮತ್ತು ಬೆಳ್ಳಿ ಬೆಲೆ ಕ್ರಮವಾಗಿ 2,027 ಡಾಲರ್ ಮತ್ತು 24.04 ಡಾಲರ್ ಆಗಿದೆ.