ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, 7,26,224 ವಿದ್ಯಾರ್ಥಿಗಳ ಭವಿಷ್ಯ ನಿರ್ಣಯ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮಾರ್ಚ್‌ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ನಾಳೆ
(ಏಪ್ರಿಲ್‌ 21 ) ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ಪರೀಕ್ಷೆಯು ಕಳೆದ ಮಾರ್ಚ್‌ 9ರಿಂದ 29ರವರೆಗೆ  1109 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. ಇದೀಗ ಫಲಿತಾಂಶವು ಇಲಾಖೆಯ ವೆಬ್‌ಸೈಟ್‌ https://karresults.nic.in ನಲ್ಲಿ ಬೆಳಗ್ಗೆ 11 ಗಂಟೆಯ ನಂತರ ಲಭ್ಯವಾಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ : ದ್ವಿತೀಯ ಪಿಯುಸಿ ಪರೀಕ್ಷೆ ಈಗ ಮತ್ತಷ್ಟು ಸುಲಭ!

ಕಳೆದ ಮಾರ್ಚ್‌ನಲ್ಲಿ ಒಟ್ಟು  7,26,224 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ  3,25,053 ವಿದ್ಯಾರ್ಥಿನಿಯರು, 3,47,038 ವಿದ್ಯಾರ್ಥಿಗಳು, 25,847 ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ 70,586 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಸದ್ಯ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಣ ಸಚಿವರು ಫಲಿತಾಂಶ ಪ್ರಕಟ ಮಾಡುವುದಿಲ್ಲ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟಮಾಡಲಿದ್ದಾರೆ

Donate Janashakthi Media

Leave a Reply

Your email address will not be published. Required fields are marked *