ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಾವಣೆ ನಿಮಿತ್ತ ನಿರಂತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ, ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ವಿಶ್ರಾಂತಿ ತೆಗೆದುಕೊಂಡು ಬಳಿಕ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವುದಾಗಿ ಮಾಹಿತಿ ನೀಡಿದ್ದಾರೆ.

ಅಷ್ಟೇ ಅಲ್ಲದೆ ಜೆಡಿಎಸ್​ ಪಕ್ಷದ ಕಾರ್ಯಕರ್ತರು, ಮುಖಂಡರು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಶೀಘ್ರ ಗುಣಮುಖನಾಗುವೆ ಎನ್ನುವ ಸಂದೇಶ ನೀಡಿದ್ದಾರೆ. ಶ್ವಾಸಕೋಶದ ಸೋಂಕು ವಿಶ್ರಾಂತಿ ಇಲ್ಲದೆ ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಅವರು ಈಗ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಅಂತೆಯೇ ಸಣ್ಣ ಪ್ರಮಾಣದಲ್ಲಿ ಲಂಗ್ಸ್​ ಇನ್ಫೆಕ್ಷನ್ ಹಾಗೂ ಡಸ್ಟ್​ ಅಲರ್ಜಿ ಕೂಡ ಇದೆ. ಇದಲ್ಲದೆ ಜ್ವರ ಕೂಡಾ ಬಂದಿರುವ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ, ಸ್ಪೆಷಲ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಮಣಿಪಾಲ್​ ಆಸ್ಪತ್ರೆಯ ಡಾ. ಸತ್ಯನಾರಾಯಣ್ ಅವರು ಎಚ್​ಡಿ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಆಸ್ಪತ್ರೆಗೆ ನಿಖಿಲ್ ಭೇಟಿ ನಿಖಿಲ್ ಕುಮಾರಸ್ವಾಮಿ ನಾಳೆ ಬೆಳಗ್ಗೆ ಆಸ್ಪತ್ರೆಗೆ ಭೇಟಿ ಕೊಟ್ಟು, ತಂದೆ ಆರೋಗ್ಯ ವಿಚಾರಿಸಲಿದ್ದಾರೆ. ನಾಳೆ ಮಧ್ಯಾಹ್ನದ ವೇಳೆ ಡಯಾಲಿಸಸ್ ಗೆ ಮಣಿಪಾಲ್ ಆಸ್ಪತ್ರೆಗೆ ಎಚ್​ಡಿ ದೇವೇಗೌಡ ಸಹ ಆಗಮಿಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಸ್ಪೆಷಲ್ ವಾರ್ಡ್ ನಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆ ಬಳಿ ಯಾರೂ ಬರದಂತೆ ಸೂಚನೆ ನೀಡಲಾಗಿದೆ.

Donate Janashakthi Media

Leave a Reply

Your email address will not be published. Required fields are marked *