ಬೆಂಗಳೂರು: ಚುನಾವಣಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಏಪ್ರಿಲ್ 23 ರಂದು ಬೆಂಗಳೂರಿನ ಹೋಟೆಲ್ನಲ್ಲಿ ಶ್ರೀನಿವಾಸ್ ಅವರು ನಡೆಸುತ್ತಿದ್ದ ಸಭೆಯ ಸಮಯದಲ್ಲಿ ಚುನಾವಣಾಧಿಕಾರಿಗಳು ಶೋಧ ಮತ್ತು ತಪಾಸಣೆ ನಡೆಸುತ್ತಿದ್ದಾಗ ಅಡ್ಡಿಪಡಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಿವಾಸ್ ಚುನಾವಣಾ ಅಧಿಕಾರಿಗಳೊಂದಿಗೆ ಸಹಕರಿಸಲಿಲ್ಲ ಮತ್ತು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು ಎಂದು ಆರೋಪಿಸಲಾಗಿದೆ. ಶ್ರೀನಿವಾಸ್ ವಿರುದ್ಧದ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರ ತಂಡ ಬೆಂಗಳೂರಿಗೆ ಆಗಮಿಸಿ ಶ್ರೀನಿವಾಸ್ ಅವರನ್ನು ಹುಡುಕಿದೆ ಎಂದು ಮೂಲಗಳು ತಿಳಿಸಿವೆ. ಅವರು ಸಿಗದ ಕಾರಣ ಅವರ ನಿವಾಸದ ಬಾಗಿಲಿಗೆ ತಮ್ಮ ಮುಂದೆ ಹಾಜರಾಗುವಂತೆ ನೋಟಿಸ್ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಮೊದಲ ಬಾರಿಗೆ ಮತ ಹಾಕುವ ಮತದಾರರನ್ನು ಸೆಳೆಯಲು ‘ಯುವ ಮತ ಅಭಿಯಾನಕ್ಕೆʼ ಕಾಂಗ್ರೆಸ್ ಚಾಲನೆ
ಶ್ರೀನಿವಾಸ್ ಅವರು ಅಸ್ಸಾಂ ಯೂತ್ ಕಾಂಗ್ರೆಸ್ ಮುಖ್ಯಸ್ಥೆ ಅಂಕಿತಾ ದತ್ತಾ ಕಿರುಕುಳ ಆರೋಪದ ನಂತರ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಾಗಿ ದತ್ತಾ ಅವರನ್ನು ಪಕ್ಷವು ಆರು ವರ್ಷಗಳ ಕಾಲ ಉಚ್ಚಾಟಿಸಿದೆ. ಕಾಂಗ್ರೆಸ್ನ ಈ ನಡೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದ್ದರೆ, ಇದು ಪಕ್ಷದ ಮಹಿಳಾ ಸಬಲೀಕರಣದ ಮಾದರಿಯಾಗಿದೆ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ.