ಡಿಕೆಶಿ ಇದ್ದ ಹೆಲಿಕ್ಯಾಪ್ಟರ್‌ಗೆ ರಣಹದ್ದು ಡಿಕ್ಕಿ; ಪ್ರಾಣಾಪಾಯದಿಂದ ಪಾರಾದ ಬಂಡೆ

Please follow and like us:

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾರೀ ಅಪಘಾತದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್‌ನ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ನಿಯಂತ್ರಣ ತಪ್ಪುತ್ತಿದ್ದಂತೆ ಎಚ್‌ಎಎಲ್ ಏರ್‌ಪೋಟ್ ಹೆಲಿಕಾಪ್ಟರ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.

ಡಿಕೆ ಶಿವಕುಮಾರ್ ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಪ್ರಚಾರಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಹೆಲಿಕಾಪ್ಟರ್ ಗಾಜು ಪುಡಿಯಾಗಿದೆ. ಇದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಇದನ್ನೂ ಓದಿ : ಡಿಕೆಶಿ ಸಮ್ಮುಖದಲ್ಲಿ ಕೈ ಪಕ್ಷಕ್ಕೆ ಗೀತಾ ಶಿವರಾಜ್ ಕುಮಾರ್ ಸೇರ್ಪಡೆ

ಕೂಡಲೇ ಹೆಲಿಕಾಪ್ಟರ್ ಅನ್ನು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಸುರಕ್ಷಿತವಾಗಿದ್ದಾರೆ.

Please follow and like us:
Donate Janashakthi Media

Leave a Reply

Your email address will not be published. Required fields are marked *