ಆರ್​​ಬಿಐನಿಂದ ಮಹತ್ವದ ನಿರ್ಧಾರ; ಇನ್ಮುಂದೆ 2 ಸಾವಿರ ರೂ. ನೋಟ್​​ ಚಲಾವಣೆ ಇಲ್ಲ

ನವದೆಹಲಿಯ : ಭಾರತ ದೇಶದಲ್ಲಿ ಚಲಾವಣೆಯಲ್ಲಿದ್ದ 2000 ರೂ. ಮುಖಬೆಲೆಯ ನೋಟ್ ಚಲಾವಣೆ
ಸ್ಥಗಿತಗೊಳಿಸಿ, ವಾಪಸ್ ಪಡೆಯಲು ಆರ್‌ಬಿಐ ಆದೇಶಿಸಿದೆ.

ಬ್ಯಾಂಕ್‌ಗಳಲ್ಲಿ 2000 ರೂ. ನೋಟ್ ಬದಲಿಸಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ಅವಕಾಶವಿದ್ದು, ಅಕ್ಟೋಬರ್ 1ರಿಂದ ನೋಟ್ ಚಲಾವಣೆಯನ್ನು ಸಂಪೂರ್ಣ ಬ್ಯಾನ್ ಮಾಡಲಾಗುವುದು ಎಂದು ಆರ್‌ಬಿಐ ಹೇಳಿದೆ.

2016ರಲ್ಲಿ 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2000 ರೂ. ನೋಟುಗಳನ್ನು ಪರಿಚಯಿಸಿತ್ತು. ಇದೀಗ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್‌ಬಿಐ ಶುಕ್ರವಾರ ತಿಳಿಸಿದೆ.

ಇನ್ಮುಂದೆ ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ ನೀಡಿದೆ. ಗ್ರಾಹಕರು ಕೂಡ ಆತಂಕ ಪಡುವ ಅಗತ್ಯವಿಲ್ಲ, ನೋಟು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ.

ಸದ್ಯ ದೇಶದಲ್ಲಿ ಚಲಾವಣೆಯಲ್ಲಿರುವ 2,000 ರೂ. ಮುಖಬೆಲೆಯ ನೋಟುಗಳಲ್ಲಿ ಶೇ.89ರಷ್ಟು ನೋಟುಗಳನ್ನು 2017ರ ಮಾರ್ಚ್​ಗೆ ಮುಂಚೆ ಮುದ್ರಿಸಿ ಬಿಡುಗಡೆ ಮಾಡಿದವುಗಳಾಗಿವೆ. 2,000 ರೂ. ನೋಟುಗಳ ಕಾಲಾವಧಿಯೇ 4-5 ವರ್ಷ ಮಾತ್ರ ಇತ್ತು. ಹೀಗಾಗಿ, ಇವುಗಳ ನೋಟುಗಳನ್ನು ಹಿಂಪಡೆಯಲಾಗುತ್ತಿದೆ.

ಗ್ರಾಹಕರು ತಮ್ಮಲ್ಲಿರುವ 2000 ರೂಪಾಯಿ ನೋಟುಗಳನ್ನು ಬ್ಯಾಂಕ್ ಖಾತೆಯಲ್ಲಿ ತಮ್ಮದೇ ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಬಹುದು. ಇನ್ನು 2000 ರೂ. ನೋಟು ವಿನಿಮಯಕ್ಕೆ ಒಂದು ನಿರ್ಬಂಧ ವಿಧಿಸಲಾಗಿದೆ. ಬ್ಯಾಂಕ್ ಚಟುವಟಿಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಒಂದು ದಿನ ಒಬ್ಬ ವ್ಯಕ್ತಿಗೆ ಗರಿಷ್ಠ 20,000 ರೂ. ಮಾತ್ರ ವಿನಿಮಯ ಮಾಡಿಕೊಳ್ಳಲು ಅವಕಾಶ ಮಾಡಲಾಗಿದೆ.

ಮೇ 23ರಿಂದ ಬ್ಯಾಂಕ್‌ಗಳಲ್ಲಿ 2,000 ರೂಪಾಯಿ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ಮಾತ್ರವಲ್ಲ ಬ್ಯಾಂಕ್ ಕೂಡ ಸೆಪ್ಟೆಂಬರ್ 30ರೊಳಗೆ 2,000 ರೂಪಾಯಿ ನೋಟಿನ ಎಲ್ಲಾ ವಿನಿಮಯ, ಜಮಾವಣೆ ಮುಗಿಸಬೇಕು ಎಂದು ಆರ್‌ಬಿಐ ಆದೇಶಿಸಿದೆ.

Donate Janashakthi Media

Leave a Reply

Your email address will not be published. Required fields are marked *