ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 ತಿದ್ದುಪಡಿ ರದ್ದು ಮಾಡಲು ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದರು.
ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ, ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಸಾಕಷ್ಟು ವಿವಾದವನ್ನು ಹುಟ್ಟು ಹಾಕಿತ್ತು. ಮತಾಂತರ ತಡೆಯುವ ನಿಟ್ಟಿನಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಬಿಜೆಪಿ ಸರ್ಕಾರ ಸಮರ್ಥಿಸಿಕೊಂಡಿತ್ತು. ಆದರೆ ಸದನದಲ್ಲಿ ಕಾಂಗ್ರೆಸ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ಇದನ್ನೂ ಓದಿ:ಮತಾಂತರ ನಿಷೇಧ ಕಾಯ್ದೆ ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ
ಆದರೆ ಇದೀಗ ಮೂರನೇ ಕ್ಯಾಬಿನೆಟ್ ಸಭೆಯಲ್ಲೇ ಮತಾಂತರ ನಿಷೇಧ ಕಾಯ್ದೆಗೆ ಕೊಕ್ ಕೊಡಲಾಗಿದೆ. ಈ ಕುರಿತಾದ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ಬಿಜೆಪಿ ಅವಧಿಯಲ್ಲಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಸೇರಿದಂತೆ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 ತಿದ್ದುಪಡಿ ರದ್ದು ಮಾಡಲು ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದರು.