ಬೆಂಗಳೂರು: ಬಾಡಿಗೆದಾರರು ಹಾಗೂ ಇತರೆ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್ನಲ್ಲಿ ಜೋಡಣೆ ಮಾಡಿದರೆ ಸಾಕು ಎಂದು ಇಂಧನ ಇಲಾಖೆ ತಿಳಿಸಿದೆ. ಈ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಇಂಧನ ಇಲಾಖೆ ಈ ಸ್ಪಷ್ಟನೆ ನೀಡಿದೆ.
ಈ ಯೋಜನೆಯು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಗೃಹ ವಿದ್ಯುತ್ ಬಳಕೆದಾರರು ಬಾಡಿಗೆದಾರರಾಗಿದ್ದಲ್ಲಿ, ವಾಸದ ಮನೆಯ ವಿಳಾಸಕ್ಕೆ ಸಂಬಂಧಿಸಿದಂತೆ ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್ನಲ್ಲಿ ಜೋಡಣೆ ಮಾಡಿ ನೋಂದಾಯಿಸುವ ಮೂಲಕ ಈ ಸೌಲಭ್ಯ ಪಡೆಯಬಹುದಾಗಿದೆ.
ಇದನ್ನೂ ಓದಿ:ಬಾಡಿಗೆದಾರರಿಗೂ ವಿದ್ಯುತ್ ಉಚಿತ- ಬಾಡಿಗೆದಾರರಿಗೆ ಇಲ್ಲಿದೆ ಮಹತ್ವ ಮಾಹಿತಿ
ಗೃಹ ಜ್ಯೋತಿ ಯೋಜನೆಯನ್ನು ಕೆಲವು ಷರತ್ತುಗಳೊಂದಿಗೆ ಜುಲೈ 1 ರಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. ಈ ಯೋಜನೆಯ ನೋಂದಣಿ ಇದೇ 18 ರಿಂದ ಆರಂಭವಾಗಲಿದೆ.ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/gruhajy ಈ ವಿಳಾಸದಲ್ಲಿ ಲಾಗಿನ್ ನೋಂದಾಯಿಸಬೇಕು.