ಏಕದಿನ ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿ ಬಿಡುಗಡೆ

ನವದೆಹಲಿ: ಏಕದಿನ ವಿಶ್ವಕಪ್‌ನ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿದೆ. 2023ರ ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೂ ನಡೆಯಲಿದ್ದು, ಈ ವರ್ಷ ಭಾರತವು ಮೊದಲ ಬಾರಿಗೆ ಸಂಪೂರ್ಣವಾಗಿ ಏಕದಿನ ವಿಶ್ವಕಪ್​ ಆತಿಥ್ಯವನ್ನು ವಹಿಸಿಕೊಂಡಿದೆ. ಅಕ್ಟೋಬರ್ 5 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧ ವಿಶ್ವಕಪ್ ಪ್ರಾರಂಭಗೊಳ್ಳಲಿದೆ.ಒಟ್ಟಾರೆಯಾಗಿ ಎಲ್ಲಾ ಪಂದ್ಯಗಳು ಭಾರತದಲ್ಲಿಯೇ ನಡೆಯಲಿವೆ.

ಆತಿಥೇಯ ಭಾರತ ತಂಡವು ಪ್ರಥಮ ಪಂದ್ಯವನ್ನು 5 ಬಾರಿ ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸುತ್ತದೆ. ರೋಹಿತ್‌ ಶರ್ಮ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಇದನ್ನೂ ಓದಿ:ವೇತನ ತಾರತಮ್ಯ ಕಳಚಿದ ಬಿಸಿಸಿಐ: ಪುರುಷರಷ್ಟೇ ಮಹಿಳಾ ಕ್ರಿಕೆಟ್‌ ಆಟಗಾರ್ತಿಯರಿಗೆ ಸಮಾನ ಪಂದ್ಯ ಶುಲ್ಕ

 ಪ್ರದರ್ಶನ ಸಮಾರಂಭದಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ವಿಶ್ವಕಪ್ ಸೂಪರ್ ಲೀಗ್ ಮೂಲಕ  ಮೊದಲ ಎಂಟು ತಂಡಗಳು ಈಗಾಗಲೇ ಕ್ರಿಕೆಟ್ ಅರ್ಹತೆ ಪಡೆದಿವೆ. ಅಕ್ಟೋಬರ್ 15 ಭಾನುವಾರ ದಂದು ಅಹಮದಾಬಾದ್‌ನಲ್ಲಿ  ಬಹು ನಿರೀಕ್ಷಿತ ಭಾರತ-ಪಾಕಿಸ್ತಾನದ ನಡುವಿನ ಪಂದ್ಯವು ನಡೆಯಲಿದೆ. ಅಕ್ಟೋಬರ್ 20 ರಂದು ಪಾಕಿಸ್ತಾನವು ಬೆಂಗಳೂರಿನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.ಅನಂತರ  ಕ್ವಾಲಿಫೈಯರ್‌ 2 ತಂಡದೊಂದಿಗೆ ಅಕ್ಟೋಬರ್‌ 26 ರಂದು ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ತಂಡ ಆಡಲಿದೆ.

ಟೂರ್ನಿಯಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿವೆ.ಅದರಂತೆ ಬೆಂಗಳೂರಿನಲ್ಲಿ 5 ಪಂದ್ಯಗಳು ನಡೆಯಲಿವೆ. ಅಕ್ಟೋಬರ್‌ 20 ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್‌ ಮತ್ತು ಆಸ್ಟ್ರೇಲಿಯಾ ಸೆಣಸಲಿದೆ.ಕೊನೆಯ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದ್ದು ಭಾರತ ತಂಡ ಕ್ವಾಲಿಫೈಯರ್‌ 1 ಎದುರು ಮುಖಾಮುಖಿಯಾಗಲಿದೆ.

Donate Janashakthi Media

Leave a Reply

Your email address will not be published. Required fields are marked *