ಇಂಫಾಲ್: ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ನಲ್ಲಿರುವ ಎರಡು ಪರಿಹಾರ ಶಿಬಿರಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭೇಟಿ ನೀಡಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ. ರಾಹುಲ್ ಗಾಂಧಿಯ ಈ ಭೇಟಿಯ ಬಿನ್ನಿಗೆ, ರಾಜ್ಯದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಬೆಳಗ್ಗೆ 9.30ರ ಸುಮಾರಿಗೆ ಇಂಫಾಲ್ನಿಂದ ಹೆಲಿಕಾಪ್ಟರ್ ಮೂಲಕ ಮೊಯಿರಾಂಗ್ ತಲುಪಿದ ರಾಹುಲ್ ಗಾಂಧಿ, ಸಂತ್ರಸ್ತ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಿದರು. ಸುಮಾರು 1,000 ಜನರು ಆಶ್ರಯ ಪಡೆದಿರುವ ಎರಡೂ ಶಿಬಿರಗಳಿಗೆ ರಾಹುಲ್ ಭೇಟಿ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನಂತರ ಅವರು ರಾಜ್ಯದ ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ಭೇಟಿ ಮಾಡಿ ಅವರೊಂದಿಗೆ ಚರ್ಚಿಸಿದ್ದಾರೆ.
I share the pain of the people of Manipur. It is a horrible tragedy. It is extremely sad and painful for all the people of Manipur and the people of India as well.
I went to the camps and met people from all communities. One of the things I would say to the government is that… pic.twitter.com/oMq4opgPrt
— Congress (@INCIndia) June 30, 2023
ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಂ ಇಬೋಬಿ ಸಿಂಗ್, ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್, ಪಿಸಿಸಿ ಅಧ್ಯಕ್ಷ ಕೇಶಾಮ್ ಮೇಘಚಂದ್ರ ಸಿಂಗ್ ಮತ್ತು ಮಾಜಿ ಸಂಸದ ಅಜಯ್ ಕುಮಾರ್ ಅವರು ರಾಹುಲ್ ಜತೆಗೆ ಇದ್ದರು.
ಇದನ್ನೂ ಓದಿ: ಮಣಿಪುರಕ್ಕೆ ತೆರಳಿರುವ ರಾಹುಲ್ ಗಾಂಧಿ ಅವರನ್ನು ತಡೆದ ಪೋಲಿಸರು
ಐತಿಹಾಸಿಕವಾಗಿ 1944 ರಲ್ಲಿ ಸುಭಾಷ್ ಚಂದ್ರ ಬೋಸ್ ನೇತೃತ್ವದ ಐಎನ್ಎ ಸೇನೆ ಭಾರತೀಯ ತ್ರಿವರ್ಣ ಧ್ವಜವನ್ನು ಹಾರಿಸಿದ ಪಟ್ಟಣ ಎಂದು ಮೊಯಿರಾಂಗ್ ಕರೆಯಲ್ಪಡುತ್ತದೆ.
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ಭೇಟಿ ಮಾಡಲಿದ್ದಾರೆ. ಸ್ಥಳೀಯ ದೈನಿಕ ದಿ ಸಂಗೈ ಎಕ್ಸ್ಪ್ರೆಸ್ನ ವರದಿಯ ಪ್ರಕಾರ, ಬಿರೇನ್ ಸಿಂಗ್ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆಯನ್ನು ಪತ್ರ ಸಲ್ಲಿಸುವ ನಿರೀಕ್ಷೆಯಿದೆ.
ಮತ್ತೆ ಭುಗಿಲೆದ್ದ ಹಿಂಸಾಚಾರ
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಗುರುವಾರ ಭದ್ರತಾ ಪಡೆಗಳು ಮತ್ತು ಶಂಕಿತ ಗಲಭೆಕೋರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.
जीना इसी का नाम है… ❤️ pic.twitter.com/d21V6OYcz4
— Congress (@INCIndia) June 30, 2023
ಒಕ್ಕೂಟ ಸರ್ಕಾರ ಮಣಿಪುರದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ವಾರಗಳಿಂದ ಪ್ರತಿಭಟನಾಕಾರರು ಮತ್ತು ರಾಜಕೀಯ ಪಕ್ಷಗಳು ಒತ್ತಾಯಿಸುತ್ತಿದ್ದಾರೆ. ಈ ಹಿಂದೆ ಮಣಿಪುರದ ಒಂಬತ್ತು ಬಿಜೆಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ಮೇಲೆ ರಾಜ್ಯದ ಜನರು ಸಂಪೂರ್ಣ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದರು.
ಇದನ್ನೂ ಓದಿ: ಮೋದಿ ಮಾಡಬೇಕಾದ ಮೊದಲ ಕೆಲಸ ಮಣಿಪುರ ಸಿಎಂ ಅವರನ್ನು ವಜಾ ಮಾಡುವುದು: ಖರ್ಗೆ ಆಗ್ರಹ
ಜನಾಂಗೀಯ ಘರ್ಷಣೆಗಳು
ಮಣಿಪುರದಲ್ಲಿ ಮೈತೆಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳ ಕಾರಣಕ್ಕೆ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಜನರು ಸಾವುಗೀಡಾಗಿದ್ದಾರೆ. ಮೇ 3 ರಂದು ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.
ಪರಿಶಿಷ್ಟ ಪಂಗಡ (ಎಸ್ಟಿ) ಸ್ಥಾನಮಾನಕ್ಕಾಗಿ ಮೈತೆಯಿ ಸಮುದಾಯವು ಈ ಮೆರವಣಿಗೆ ಆಯೋಜಿಸಿತ್ತು. ಇದಕ್ಕೆ ಬುಡಕಟ್ಟು ಕುಕಿ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಂದಿನಿಂದ ಎರಡು ಗುಂಪುಗಳ ನಡುವಿನ ಘರ್ಷಣೆ ತೀವ್ರಗೊಂಡಿದೆ.