ಗಗನಕ್ಕೇರಿದ ತರಕಾರಿ ಬೆಲೆ: ರೈತನ ಹೊಲದಲ್ಲಿ ₹2 ಲಕ್ಷ ಮೌಲ್ಯದ ಟೊಮೆಟೊ ಕಳ್ಳತನ

ಹಾಸನ:ದೇಶಾದ್ಯಂತ ಟೊಮೆಟೋ ದರ ಗಗನಕ್ಕೇರಿರುವಂತೆಯೇ ಹಾಸನದಲ್ಲಿ ಸುಮಾರು 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 2 ಲಕ್ಷ ರೂ ಮೌಲ್ಯದ ಟೊಮೆಟೋ ಬೆಳೆಯನ್ನು ದುಷ್ಕರ್ಮಿಗಳು ಕಳ್ಳತನ ಮಾಡಿದ್ದಾರೆ.

 

ಇದನ್ನೂ ಓದಿ:ಮಾರುಕಟ್ಟೆಯ ಅರ್ಧದಷ್ಟು ಬೆಲೆಗೆ ಟಮೆಟೋ ಮಾರಾಟ ಮಾಡಲು ಕ್ರಮ

ಹಾಸನ ಜಿಲ್ಲೆಯ ಬೇಲೂರು  ತಾಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಮೌಲ್ಯದ ಟೊಮೆಟೋವನ್ನು ಕಳ್ಳರು ಕದ್ದೊಯ್ದಿದ್ದಾರೆ. ಗ್ರಾಮದ ಸೋಮಶೇಖರ್ ಎಂಬವರು ತಮ್ಮ ಸುಮಾರು 2 ಎಕರೆ ಜಮೀನಿನಲ್ಲಿ ಟೊಮೆಟೋ ಬೆಳೆದಿದ್ದರು. ಸೋಮಶೇಖರ್ ಮತ್ತು ಅವರ ಏಕೈಕ ಪುತ್ರ ಧರಣಿ ಶ್ರಮಜೀವಿಗಳಾಗಿದ್ದು ಟೊಮೆಟೊ ಬೆಲೆ ಏರಿಕೆಯ ನಂತರ ತಮ್ಮ ಜೀವನದಲ್ಲಿ ಅತ್ಯಧಿಕ ಕೃಷಿ ಆದಾಯವನ್ನು ನಿರೀಕ್ಷಿಸಿದ್ದರು. ಟೊಮೆಟೋ ಬೆಳೆಯಿಂದ ಉತ್ತಮ ಇಳುವರಿ ಬಂದಿದ್ದ ಹಿನ್ನೆಲೆ ಕಳೆದ ಮೂರು ದಿನದಿಂದ ಟೊಮೆಟೊ ಕೊಯ್ದು ಮಾರಾಟ ಮಾಡುತ್ತಿದ್ದರು.

ತಮಗೆ ಆದ ಅನ್ಯಾಯದ ಬಗ್ಗೆ ಮಾಧ್ಯಮಗಳ ಜೊತೆ ಸೋಮಶೇಖರ್ ಅವರು ಮಾತನಾಡಿ, ಐದು ವರ್ಷಗಳ ಹಿಂದೆ ಅವರಿಗೆ ಎಡಗೈ ಪಾರ್ಶ್ವವಾಯುವಿಗೆ ತುತ್ತಾಗಿ ಬಲಗೈಯಲ್ಲಿ ಕೆಲಸ ಮಾಡುತ್ತಿದ್ದು, ಕೃಷಿಯಲ್ಲಿ ಬದ್ಧರಾಗಿರುವ ತಂದೆ ಮತ್ತು ಮಗ ಧರಣಿಗೆ ಮಾರುಕಟ್ಟೆಯಲ್ಲಿ ಟೊಮೆಟೊಗೆ ಭಾರಿ ಬೇಡಿಕೆ ಮತ್ತು ಅತ್ಯಧಿಕ ಬೆಲೆಯ ಬಗ್ಗೆ ತಿಳಿದಿತ್ತು. ಜಾನುವಾರುಗಳ ಹಾವಳಿ ತಪ್ಪಿಸಲು ಅವರು ಪ್ರತಿದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಹೊಲದಲ್ಲಿ ಕಾವಲು ಕಾಯುತ್ತಿದ್ದರು. ಇದೇ ಕಾರಣಕ್ಕಾಗಿ ಅವರು ತಮ್ಮ ಕೃಷಿ ಭೂಮಿಯಲ್ಲೇ ಉಪಹಾರ ಮತ್ತು ಊಟ ಕೂಡ ಸೇವಿಸುತ್ತಿದ್ದರು. ಆದರೆ ಇಷ್ಟು ಭದ್ರತೆಯ ಹೊರತಾಗಿಯೂ ಬೆಳೆ ಕಳ್ಳತನವಾಗಿದೆ.

ದುಷ್ಕರ್ಮಿಗಳು ಗಿಡಗಳನ್ನು ಹಾಳು ಮಾಡಿದ್ದು, ಗಿಡದಿಂದ ಅಪಾರ ಪ್ರಮಾಣದ ಹೂವು, ಮೊಗ್ಗುಗಳು ಬಿದ್ದಿದ್ದರಿಂದ ಸಂಪೂರ್ಣ ಬೆಳೆ ನಷ್ಟವಾಗಿದೆ. ಹಾಸನದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಜಮೀನಿನಲ್ಲಿದ್ದ ಟೊಮೆಟೊ ಬೆಳೆ ಕಳ್ಳತನವಾಗಿದೆ. ಪೊಲೀಸರು ಸ್ಥಳದಲ್ಲಿ ಮದ್ಯದ ಬಾಟಲಿಗಳು ಮತ್ತು ಸಿಗರೇಟ್ ಪ್ಯಾಕ್‌ಗಳನ್ನು ಪತ್ತೆಹಚ್ಚಿದ್ದು, ಕಳ್ಳತನದಲ್ಲಿ ಸ್ಥಳೀಯರ ಕೈವಾಡದ ಶಂಕೆ ವ್ಯಕ್ತಪಡಿಸಿದ್ದಾರೆ. ಹಿರಿಯ ತೋಟಗಾರಿಕಾ ಅಧಿಕಾರಿಗಳು ಕೂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *