Karnataka Budget 2023 Live Updates | ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ ಸಂಕ್ಷಿಪ್ತ ಮಾಹಿತಿ

Karnataka Budget 2023 Live Updates | ಕರ್ನಾಟಕ ಬಜೆಟ್ 2023

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಕರ್ನಾಟಕ ಬಜೆಟ್ 2023ರ ಇಲಾಖಾವಾರು ಅನುದಾನ ಹಂಚಿಕೆ ವಿವರ ಕೆಳಗಿನಂತಿದೆ.

– ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ ಮೀಸಲು.

– ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ.

– ಇಂಧನ ಇಲಾಖೆ 22,000 ಕೋಟಿ.

– ನೀರಾವರಿ ಇಲಾಖೆ 19,000 ಕೋಟಿ.

– ಗ್ರಾಮೀಣಾಭಿವೃದ್ಧಿ & ಪಂಚಾಯತ್‌ರಾಜ್ ಇಲಾಖೆ 18,000 ಕೋಟಿ.

– ಒಳಾಡಳಿತ & ಸಾರಿಗೆ ಇಲಾಖೆ 16,000 ಕೋಟಿ.

– ಕಂದಾಯ ಇಲಾಖೆ 16,000 ಕೋಟಿ.

– ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,000 ಕೋಟಿ.

– ಸಮಾಜ ಕಲ್ಯಾಣ ಇಲಾಖೆ 11,000 ಕೋಟಿ ಮೀಸಲು.

– ಲೋಕೋಪಯೋಗಿ ಇಲಾಖೆ 10,000 ಕೋಟಿ.

– ಕೃಷಿ & ತೋಟಗಾರಿಕೆ ಇಲಾಖೆ 5,800 ಕೋಟಿ.

– ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಕರ್ನಾಟಕ ಬಜೆಟ್ 2023ರ ವಲಯವಾರು ಅನುದಾನ ಇಂತಿದೆ.

  • ಶಿಕ್ಷಣ – 37,587 ಕೋಟಿ.
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ – 24,166 ಕೋಟಿ.
  • ಇಂಧನ – 22,773 ಕೋಟಿ.
  • ನೀರಾವರಿ – 19,044 ಕೋಟಿ.
  • ಗ್ರಾಮೀಣಾಭಿವೃದ್ಧಿ – 18,038 ಕೋಟಿ.
  • ಒಳಾಡಳಿತ ಮತ್ತು ಸಾರಿಗೆ – 16,638 ಕೋಟಿ.
  • ಕಂದಾಯ – 16,167 ಕೋಟಿ.
  • ಆರೋಗ್ಯ – 14,950 ಕೋಟಿ.
  • ಸಮಾಜ ಕಲ್ಯಾಣ – 11,173 ಕೋಟಿ.
  • ಆಹಾರ ಮತ್ತು ನಾಗರೀಕ ಪೂರೈಕೆ – 10,460 ಕೋಟಿ.
  • ಲೋಕೋಪಯೋಗಿ – 10,143 ಕೋಟಿ.
  • ಕೃಷಿ – 5,860 ಕೋಟಿ.
  • ಪಶುಸಂಗೋಪನೆ ಮತ್ತು ಮೀನುಗಾರಿಕೆ – 3,024 ಕೋಟಿ.
  • ಇತರೆ – 1,09,639 ಕೋಟಿ
  • ಡೆಲಿವರಿ ಬಾಯ್‌ಗಳಿಗೆ ಬಂಪರ್

– ಜೊಮಾಟೊ, ಸ್ವಿಗ್ಗಿ, ಅಮೆಜಾನ್ ಮುಂತಾದ ಇ-ಕಾಮರ್ಸ್ ಕಂಪನಿಗಳಲ್ಲಿ ಕೆಲಸ ಮಾಡುವ ಡೆಲಿವರಿ ಬಾಯ್‌ಗಳಿಗೆ ಬಂಪರ್‌ ಕೊಡುಗೆ.

– ಪೂರ್ಣ ಸಮಯ ಅಥವಾ ಅರೆಕಾಲಿಕ ಡೆಲಿವರಿ ಬಾಯ್‌ಗಳಿಗೆ ಸಾಮಾಜಿಕ ಭದ್ರತೆ.

– ಈ ನಿಟ್ಟಿನಲ್ಲಿ 4 ಲಕ್ಷ ರೂ. ಜೀವ ಮತ್ತು ಅಪಘಾತ ವಿಮೆ ಘೋಷಿಸಿದ ಸಿಎಂ ಸಿದ್ದರಾಮಯ್ಯ.

  • ವೃತ್ತಿ ಚೈತನ್ಯ ಯೋಜನೆ

– ವೃತ್ತಿ ಚೈತನ್ಯ ಯೋಜನೆಯಡಿ ಇಲಾಖೆಯ ಸುಮಾರು 7,800 ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ಕಾರ್ಯಕ್ರಮ.

– ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ 10 ಕೋಟಿ ರೂ. ಅಂದಾಜು ವೆಚ್ಚದಲ್ಲಿ ತರಬೇತಿ ಕಾರ್ಯಕ್ರಮ ಆಯೋಜನೆ.

– ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ Ph.D. ಸೀಟುಗಳನ್ನು ಭರ್ತಿ ಮಾಡುವ ವಿಧಾನದಲ್ಲಿ ಏಕರೂಪತೆ.

– ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ Ph.D. ಸೀಟುಗಳಿಗೆ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಶೇ.40 ಸೀಟುಗಳಿಗೆ ಕೌನ್ಸೆಲಿಂಗ್.

– ಬೆಂಗಳೂರಿನ ಎಸ್‌.ಕೆ.ಎಸ್‌.ಜೆ.ಟಿ.ಐ ಎಂಜಿನಿಯರಿಂಗ್‌ ಕಾಲೇಜಿನಲ್ಲಿರುವ ಜವಳಿ ತಂತ್ರಜ್ಞಾನ ವಿಭಾಗವನ್ನು ರಾಷ್ಟ್ರೀಯ Technical Textile ಅಭಿಯಾನ ಮತ್ತು ಪಿಎಂ-ಮಿತ್ರ ಯೋಜನೆಗಳಡಿ Smart and Technical Textile Centre ಆಗಿ ಉನ್ನತೀಕರಣ.

– ರಾಜ್ಯದ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬ್ರಿಟಿಷ್‌ ಕೌನ್ಸಿಲ್‌ ಮತ್ತು ಪ್ರಾದೇಶಿಕ ಆಂಗ್ಲ ಸಂಸ್ಥೆಯ ಸಹಕಾರದೊಂದಿಗೆ ವ್ಯಾವಹಾರಿಕ ಆಂಗ್ಲ ತರಗತಿ ಪ್ರಾರಂಭ.

– ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುವಾಗಲು ರೆಫರೆನ್ಸ್‌ ಪುಸ್ತಕಗಳನ್ನು ಹಾಗೂ ಪಠ್ಯ ವಿಷಯಗಳನ್ನು ಭಾಷಾಂತರಿಸಲು ಕ್ರಮ.

  • ರಾಜ್ಯದ 314 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 4,500 ಕೋಟಿ ರೂ.

– ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ 2.0 ಯೋಜನೆಯನ್ನು ವೆಚ್ಚ ಹಂಚಿಕೆ ಆಧಾರದಲ್ಲಿ ಜಾರಿಗೊಳಿಸಿದೆ.

– ಬಿ.ಬಿ.ಎಂ.ಪಿ. ಸೇರಿದಂತೆ ರಾಜ್ಯದ 314 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 4,500 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ.

– ಇದರಲ್ಲಿ ಕೇಂದ್ರ ಸರ್ಕಾರದ ಪಾಲು 1,900 ಕೋಟಿ ರೂ. ಮತ್ತು ರಾಜ್ಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಾಲು 2,600 ಕೋಟಿ ರೂ. ಗಳಾಗಿವೆ.

– ಈ ಯೋಜನೆಯಡಿಯಲ್ಲಿ ಸುಸ್ಥಿರ ಘನತ್ಯಾಜ್ಯ ನಿರ್ವಹಣೆ ಮತ್ತು ಬಳಸಿದ ನೀರಿನ ನಿರ್ವಹಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

  • ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ

– ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆ.

– ಹೊಸ ವಿಮಾನ ನಿಲ್ದಾಣ ಯೋಜನೆಗೆ ಬಜೆಟ್‌ನಲ್ಲಿ ಅನುಮೋದನೆ.

  • ಹಜ್ ಭವನದಲ್ಲಿ‌ ಅಲ್ಪಸಂಖ್ಯಾತ ಯುವಕರಿಗೆ ಐಎಎಸ್, ಕೆಎಎಸ್ ತರಬೇತಿ

 Karnataka-Budget-2023-24-ಸಿದ್ದರಾಮಯ್ಯ-ಕರ್ನಾಟಕ-ಬಜೆಟ್-Siddaramaiah

– ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ, ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಗೆ 4 ಕೋಟಿ ಅನುದಾನ.

– ಜೈನರ ಪ್ರಮುಖ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ಅನುದಾನ

– ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ. ಅದಕ್ಕಾಗಿ 100ಕೋಟಿ ಅನುದಾನ.

– ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹತ್ತು ತಿಂಗಳು ವಸತಿ ಸಹಿತ ಐಎಎಸ್ ಹಾಗೂ ಕೆ ಎ ಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ.

– ಹಲಸೂರಿನಲ್ಲಿರುವ ಗುರುದ್ವಾರದ ಅಭಿವೃದ್ಧಿಗೆ 25 ಕೋಟಿ ಅನುದಾನ
ಬಿಸಿಯೂಟ ಯೋಜನೆಗೆ 280 ಕೋಟಿ.

– ಈ ಹಿಂದೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಮುಂದುವರಿಸಲು ನಿರ್ಧಾರ.

– ಈ ಯೋಜನೆಗೆ 60 ಕೋಟಿ ಅನುದಾನ ಮೀಸಲು.

– ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡಲು ಶೇ 2 ಬಡ್ಡಿ ದರದಲ್ಲಿ ಸಾಲ.

– ಐದು ಕೋಟಿ ವೆಚ್ಚದಲ್ಲಿ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ ಸ್ಥಾಪನೆ.

– ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿಗಳಲ್ಲಿ ಪದವಿ ಸ್ನಾತಕೋತ್ತರ ವ್ಯಾಸಾಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷದ ವರಗೆ ಸಾಲ.

  • ಆಸಿಡ್‍‍ ದಾಳಿ ಸಂತ್ರಸ್ತರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ

– ರಾಜ್ಯದಲ್ಲಿನ ಆಸಿಡ್‍‍ ದಾಳಿ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಕ್ರಮ.

– ಸಂತ್ರಸ್ತರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 5 ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ.

– ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ.

– ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ. ಆಯವ್ಯಯ ನಿಗದಿ.

– ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023-24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ.

  • 1696 ಕೋಟಿ ವೆಚ್ಚದಲ್ಲಿ ಹೈಬ್ರಿಡ್ ಆನ್ಯೂಟಿ ಮಾದರಿ ರಸ್ತೆ

– ಕಲ್ಯಾಣ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಅನುದಾನ.

– ರಾಯಚೂರಿನ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರಿನವರೆಗೆ ಹೈಬ್ರಿಡ್ ಆನ್ಯೂಟಿ ಮಾದರಿಯ ರಸ್ತೆ ನಿರ್ಮಾಣ.

– 1696 ಕೋಟಿ ವೆಚ್ಚದಲ್ಲಿ 78 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಅನುದಾನ.

– 4,083 ಕೋಟಿ ವೆಚ್ಚದಲ್ಲಿ ಅಂತರ್ ಜಿಲ್ಲಾ ಸಂಪರ್ಕ ಕಲ್ಪಿಸಲು 2400 ಕಿ.ಮೀ ಜಿಲ್ಲಾ ರಸ್ತೆಗಳ ಅಭಿವೃದ್ಧಿ.

  • ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕ್ರಮ

– ಹಿಂದಿನ ಅವಧಿಯಲ್ಲಿದ್ದ ಬಡವರಿಗೆ ಉಚಿತ ಡಯಾಲಿಸಿಸ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು.

– ಇದೀಗ ಏಕಬಳಕೆಯ ಡಯಾಲೈಸರ್‌ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಣೆ.

– ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್‌ ಕೇಂದ್ರಗಳನ್ನು 219ಕ್ಕೆ ಹೆಚ್ಚಳ.

– ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 92 ಕೋಟಿ ರೂ. ಗಳನ್ನು ಅನುದಾನ.

– ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಈಗಾಗಲೇ 23 PHC ಗಳನ್ನು CHC ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ.

– ಈ CHC ಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳ ಅನುದಾನ.

– ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಅನುದಾನ.

– ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಸೆಂಟರ್‌ ನಿರ್ಮಾಣ.

Karnataka Budget 2023 Live Updates | ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ ಹೆಚ್ಚಳ

  • ಏಕ ಶಿಷ್ಯ ವೇತನ ಕಾರ್ಯಕ್ರಮ

– ಉನ್ನತ ಶಿಕ್ಷಣ ಇಲಾಖೆಯಡಿ ಎಲ್ಲಾ ಶಿಷ್ಯ ವೇತನ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಏಕ ಶಿಷ್ಯ ವೇತನ ಕಾರ್ಯಕ್ರಮ.

– ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು (Good Governance Indicators) ರಚನೆ.

  • ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ

– ಹಿಂದಿನ ಸರ್ಕಾರದ ನೀರಾವರಿ ಯೋಜನೆಯನ್ನು ಕೈ ಬಿಡಲು ನಿರ್ಧಾರ.

– 19 ಕೆರೆ ತುಂಬಿಸುವ ಯೋಜನೆಗೆ ಬರೋಬ್ಬರಿ 770 ಕೋಟಿ ರೂಪಾಯಿ ಮೀಸಲು.

– ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ.

– ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಅನುದಾನ.

– ಮೇಕೆದಾಟು ಯೋಜನೆಯ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ.

  • ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ ಹೆಚ್ಚಳ

– ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ.

– ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿ 10 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಳ.

– ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ.

  • ಪುನೀತ್ ರಾಜ್‌ಕುಮಾರ್‌ ಹೆಸರಲ್ಲಿ ಹೃದ್ರೋಗ ಆಸ್ಪತ್ರೆ

– ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥ ಹೃದ್ರೋಗ ಆಸ್ಪತ್ರೆ

– ಹಠಾತ್‌ ಹೃದಯ ಸಂಬಂಧ ಸಾವುಗಳನ್ನು ತಡೆಗಟ್ಟಲು ಯೋಜನೆ

– ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್ ಅಥವಾ Automated External Defibrillator ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲು ಕ್ರಮ

  • ಆನ್ ಲೈನ್ ಮೂಲಕ ವಿವಾಹ ನೋಂದಣಿಗೆ ಅವಕಾಶ

– ಕಾವೇರಿ2.0 ತಂತ್ರಾಶದಲ್ಲಿ ಆನ್ ಲೈನ್ ಮೂಲಕ ವಿವಾಹ ನೋಂದಣಿಗೆ ಅವಕಾಶ

– ಗ್ರಾಮ ಪಂಚಾಯಿತಿ ಬಾಪೂ ಸೇವಾ ಕೇಂದ್ರ ಹಾಗು ಗ್ರಾಮ-1 ನಲ್ಲಿಯೂ ಅರ್ಜಿ ಸಲ್ಲಿಕೆಗೆ ಅವಕಾಶ

– ಇದುವರೆಗೆ ಉಪ ನೊಂದಣಿ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿ ಮಾಡಲಾಗುತ್ತಿತ್ತು.

  • ‘ಮರುಸಿಂಚನ’ ಎಂಬ ಹೊಸ ಯೋಜನೆ 

– ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮ

– ‘ಮರುಸಿಂಚನ’ ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ಯೋಜನೆ

 

  • ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು? 

– ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ ದಿಂದ 45,000 ರೂ. ಗಳವರೆಗೆ ಹೆಚ್ಚಳ

– 47,272 ಶಾಲೆಗಳು ಹಾಗೂ 1231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆ 153 ಕೋಟಿ ರೂ. ಅನುದಾನ

– ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು.

– ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂ. ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು.

– ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ನೀಡುವ ಊಟದಲ್ಲಿ ಪರಿಷ್ಕರಣೆ.

– ವಾರದಲ್ಲಿ 2 ಬಾರಿ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲು ನಿರ್ಧಾರ.

– ಬಿಸಿಯೂಟ ಯೋಜನೆಗೆ 280 ಕೋಟಿ ಅನುದಾನ.

– ಈ ಯೋಜನೆಯನ್ನು 9 ಮತ್ತು 10ನೇ ತರಗತಿಗೂ ವಿಸ್ತರಣೆ.

  • ಎಪಿಎಂಸಿ ಕಾಯಿದೆ ವಾಪಸ್ 

– ಎಪಿಎಂಸಿ ಕಾಯಿದೆ ವಾಪಸ್ ತೆಗೆದುಕೊಳ್ಳುವುದಾಗಿ ಸಿಎಂ ಘೋಷಣೆ

– ಸಿಎಂ ಘೋಷಣೆ ಮಾಡ್ತಿದ್ದಂತೆ ಮೇಜು ತಟ್ಟಿದ ಆಡಳಿತ ಪಕ್ಷದ ಸದಸ್ಯರು

– ಮೇಜು ತಟ್ಟಿ ಸರ್ಕಾರದ‌ ನಿರ್ಧಾರ ಸ್ವಾಗತಿಸಿದ ಆಡಳಿತ ಪಕ್ಷದ ಸದಸ್ಯರು

  • ಶಕ್ತಿ ಯೋಜನೆಗೆ ಅನುದಾನ 

– ಶಕ್ತಿ ಯೋಜನೆಗೆ ವಾರ್ಷಿಕ 4 ಸಾವಿರ ಕೋಟಿ

– ಗೃಹಜ್ಯೋತಿ ಯೋಜನೆಗೆ 13,910 ಕೋಟಿ ಅನುದಾನ

  • ಅನುಗ್ರಹ ಯೋಜನೆ ಜಾರಿ

– ಅನುಗ್ರಹ ಯೋಜನೆಯನ್ನು ಮರುಜಾರಿಗೊಳಿಸಿದ ಸಿಎಂ ಸಿದ್ದರಾಮಯ್ಯ

– ಕುರಿ ಮತ್ತು ಮೇಕೆಗಳು ಮೃತಪಟ್ಟರೆ 5000 ರೂ ಪರಿಹಾರ

– ಹಸು, ಎಮ್ಮೆ, ಎತ್ತುಗಳಿಗೆ 10000 ರೂ ಪರಿಹಾರ

– ಹಿಂದಿನ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ್ದ ಅನುಗ್ರಹ ಯೋಜನೆ

  • ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ

– ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ

– ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ

– ಮೈಸೂರು ಮತ್ತು ಕಲಬುರಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್‌ ಸೆಂಟರ್

– ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ

– ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

  • ಬೆಂಗಳೂರಿಗೆ ಬಂಪರ್ ಕೊಡುಗೆ

– ಬೆಂಗಳೂರಿಗೆ 45,000 ಕೋಟಿ ಅನುದಾನ ಘೋಷಣೆ

– ಬೆಂಗಳೂರು ವೈಟ್‌ ಟಾಪಿಂಗ್​, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆಗೆ ಮೀಸಲು

– ರಾಜಕಾಲುವೆ ತೆರವು & ದುರಸ್ತಿಗೆ ಅನುದಾನಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಅನುದಾನ

– ಬ್ರ್ಯಾಂಡ್ ಬೆಂಗಳೂರಿಗೆ ಆದ್ಯತೆ ನೀಡಲು 45 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ.

  •  ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ

– ಹಿಂದಿನ ಸರ್ಕಾರದ ನೀರಾವರಿ ಯೋಜನೆಯನ್ನ ಕೈ ಬಿಡಲು ನಿರ್ಧಾರ

– 19 ಕೆರೆ ತುಂಬಿಸು ಯೋಜನೆಗೆ ಬರೋಬ್ಬರಿ 770 ಕೋಟಿ ರೂಪಾಯಿ ಮೀಸಲು

– ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ

– ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಅನುದಾನ

– ಮೇಕೆದಾಟು ಯೋಜನೆಯ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ

  • ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ ಹೆಚ್ಚಳ

– ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ

– ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿ 10 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಳ

– ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ

  • ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ.

Karnataka Budget 2023 Live Updates | ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ.

– ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ. ಅನುದಾನ.

– ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರ್ಯಾಂಡಿಗ್‌ಗೆ 10 ಕೋಟಿ ರೂ. ಅನುದಾನ.

– ಕಿರು ಆಹಾರ ಸಂಸ್ಕರಣಾ ಉದ್ದಿಮಿದಾರರಿಗೆ 5 ಕೋಟಿ ರೂ. ಅನುದಾನ. 

  • ಐದು ಗ್ಯಾರಂಟಿ ಯೋಜನೆಗಳಿಗೆ ಸುಮಾರು 52,000 ಕೋಟಿ

Karnataka Budget 2023 Live Updates | ಐದು ಗ್ಯಾರಂಟಿ ಯೋಜನೆಗಳಿಗೆ ಸುಮಾರು 52,000 ಕೋಟಿ

– ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲ ಜನರಿಗೆ ಹೆಚ್ಚಿನ ಹೊರೆಯಾಗದಂತೆ ಹೊಂದಿಕೆ.

– ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ.

– ತೆರಿಗೆ ಸೋರಿಕೆಯನ್ನು ತಡೆಗಟ್ಟುವುದರ ಜೊತೆಗೆ ಸರ್ಕಾರದ ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ.

– ಯೋಜನೆಗಳು ಅರ್ಹರಿಗೆ ನೇರವಾಗಿ ತಲುಪುವುದರಿಂದ ಹಾಗೂ ಬವಣೆಗಳ ಭಾರದಿಂದ ಏದುಸಿರು ಬಿಡುತ್ತಿರುವ ಬಡವರ ಬದುಕಿನಲ್ಲಿ ಪ್ರಾಣವಾಯುವಿನಂತೆ ಕೆಲಸ ಮಾಡುವುದೆಂಬ ಆಶಯದೊಂದಿಗೆ ಇವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸರ್ಕಾರ ಬದ್ಧ.

  • ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ

Karnataka Budget 2023 Live Updates | ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ

– ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ.

– ನಮ್ಮ ಮೆಟ್ರೋಗೆ 30,000 ಕೋಟಿ.

– ಕೃಷಿ ಉದ್ಯಮ ಉತ್ತೇಜನಕ್ಕೆ ನವೋದ್ಯಮ ಯೋಜನೆಗೆ 10 ಕೋಟಿ.

– ಕೃಷಿ ಭಾಗ್ಯ ಯೋಜನೆಗೆ ಮನ್ರೇಗಾ ಅಡಿಯಲ್ಲಿ 100 ಕೋಟಿ.

– ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ.

– ರೈತರಿಗೆ 3 ಲಕ್ಷದಿಂದ 5 ಲಕ್ಷದ ವರೆಗೆ ಅಲ್ಪಾವಧಿ ಸಾಲ.

ಬಜೆಟ್ ಮಂಡನೆಯಲ್ಲಿ ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ಹೇಳಿಕೆ ಉಲ್ಲೇಖಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನೂತನ ಕಾಂಗ್ರೆಸ್ ಸರ್ಕಾರದ ಮೊದಲನೆ ಬಜೆಟ್ (Karnataka Budget 2023-24) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದರು. ಇದು ಅವರ 14ನೇ ಬಜೆಟ್ ಆಗಿದ್ದು, ಮುಖ್ಯಮಂತ್ರಿಯಾಗಿ ಏಳನೇ ಬಜೆಟ್ ಆಗಿದೆ. “ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಕರ್ನಾಟಕವು ಬಸವಣ್ಣನ ಕಾಲದಿಂದಲೂ ಶ್ರಮಿಸುತ್ತಿದೆ. ನಾನು ಈ ಸಂಪ್ರದಾಯವನ್ನು ಮುಂದುವರಿಸಲು ಪ್ರಯತ್ನಿಸುತ್ತಿದ್ದೇನೆ” ಎಂದು ಅವರು ಹೇಳಿದರು.

Karnataka Budget 2023-24 Siddaramaiah Karnataka-Budget-2023-24-ಸಿದ್ದರಾಮಯ್ಯ-ಕರ್ನಾಟಕ-ಬಜೆಟ್-Siddaramaiah

ಬಜೆಟ್ ಮಂಡನೆಗೆ ಮುನ್ನ ಮಾತನಾಡಿದ ಸಿದ್ದರಾಮಯ್ಯ, “ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಯನ್ನು ಕೇವಲ ಬಿಟ್ಟಿ ಯೋಜನೆ ಎಂದು ಆಡಿಕೊಳ್ಳುವವರು ನಮ್ಮ ರಾಜ್ಯದ ಬಡವರ, ಶ್ರಮಿಕರ ಬದುಕನ್ನು ಗಮನಿಸಬೇಕಾಗಿದೆ” ಎಂದು ವಿರೋಧ ಪಕ್ಷವನ್ನು ಉಲ್ಲೇಖಿಸಿ ಹೇಳಿದರು.

“ತಾವು ವಿರೋಧ ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸಿ ಆದರೆ ಶ್ರೀಸಾಮಾನ್ಯರ ವಿವೇಚನೆಗೆ ಅಪಮಾನ ಮಾಡಬೇಡಿ. ಜನರು ಬುದ್ದಿವಂತರು, ಪ್ರಜ್ಞಾವಂತರಾಗಿದ್ದು, ಇಂತಹ ತರ್ಕರಹಿತ ಆಲೋಚನೆಗಳನ್ನು ನಂಬುವುದಿಲ್ಲ. ವಾಸ್ತವವೆಂದರೆ, ಜನ ನಿಮ್ಮಿಂದ ಬೇಸೆತ್ತು ಭಾರಿ ಬಹುಮತದಿಂದ ನಮ್ಮನ್ನು ಗೆಲ್ಲಿಸಿ ಕಳುಹಿಸಿದ್ದಾರೆ” ಎಂದರು.

ಒಟ್ಟು 3 ಲಕ್ಷ 27 ಸಾವಿರ ಕೋಟಿ ಗಾತ್ರದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿದ್ದಾರೆ. ಮುಖ್ಯವಾಗಿ ಅಬಕಾರಿ ತೆರಿಗೆ ಶೇಕಡಾ 20 ರಷ್ಟು ಹೆಚ್ಚಳವಾಗಲಿದ್ದು, ಬಿಯರ್‌ ಮೇಲಿನ ಅಬಕಾರಿ ಸುಂಕ ಶೇಕಡಾ 10 ರಷ್ಟು ಹೆಚ್ಚಳವಾಗಲಿದೆ.

ಪರಿಸರ ರಕ್ಷಣೆಗೆ ಆದ್ಯತೆಯಿಂದ ಕೆಲಸ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದು, ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಹೇಳಿದರು. “ಕಾಂಗ್ರೆಸ್ ಸರ್ಕಾರವೂ ಜನರ ಕನಸಿಗೆ ರೆಕ್ಕೆ ಮೂಡಿಸುವ ಕೆಲಸ ಮಾಡುತ್ತಿದೆ. ಆಗಸ್ಟ್‌ನಲ್ಲಿ ಗೃಹ ಜ್ಯೋತಿ ಯೋಜನೆ ಜಾರಿಗೆ ಬರಲಿದೆ ಎಂದು ಹೇಳಿದರು.

ಗೃಹ ಲಕ್ಷ್ಮಿ ಹಾಗೂ ಗೃಹ ಜ್ಯೋತಿ ಬೆಲೆ ಏರಿಕೆಯಿಂದ ಕಂಗಾಲದ ಜನರಿಗೆ ನಿರಾಳತೆ ತಂದುಕೊಡುತ್ತವೆ ಎಂದು ಹೇಳಿದ ಸಿದ್ದರಾಮಯ್ಯ, ತಮ್ಮ ಸರ್ಕಾರದ ಮತ್ತೊಂದು ಘೋಷಣೆಯಾದ ಯುವ ನಿಧಿ ಯುವಕರ ಆತ್ಮವಿಶ್ವಾಸ ಹೆಚ್ಚಿಸುತ್ತೆ ಎಂದರು.

Donate Janashakthi Media

Leave a Reply

Your email address will not be published. Required fields are marked *