ಕಲಬುರ್ಗಿ: ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಎಸ್ಆರ್ಟಿಸಿ ಚಾಲಕ ಕಂ.ನಿರ್ವಾಹಕರೊಬ್ಬರು ಇಂದು (ಜುಲೈ-14) ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಕಲಬುರ್ಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ. ಡಿಪೋ ಮ್ಯಾನೇಜರ್ ತನಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಡಿಪೋ ಮ್ಯಾನೇಜರ್ ತನಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ. ಸರಿಯಾಗಿ ಡ್ಯೂಟಿ ನೀಡುತ್ತಿಲ್ಲ. ಹೆಚ್ಚುವರಿ ಕೆಲಸ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ಬೀರಣ್ಣಾ ಅವರು ಆರೋಪಿಸಿದ್ದಾರೆ. ಅಲ್ಲದೆ, ಕಿರುಕುಳಕ್ಕೆ ಬೇಸತ್ತು ಡಿಪೋದಲ್ಲಿಯೇ ಡಿಸೇಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಿಸೇಲ್ ಸುರಿದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸಿಬ್ಬಂದಿ, ಅನಾಹುತವನ್ನು ತಡೆದಿದ್ದಾರೆ.
ಇದನ್ನೂ ಓದಿ:ಕೆಲಸದ ಒತ್ತಡ ಹೆಚ್ಚಳ : ಸಾರಿಗೆ ನೌಕರರಿಂದ ಜುಲೈ 6ಕ್ಕೆ ಪ್ರತಿಭಟನೆ
ಇತ್ತೀಚೆಗಷ್ಟೇ, ವರ್ಗಾವಣೆಗೊಂಡಿದ್ದಕ್ಕೆ ಮನನೊಂದು ಮಂಡ್ಯ ಜಿಲ್ಲೆಯ ನಾಗಮಂಗಲದ ಕೆಎಸ್ಆರ್ಟಿಸಿ ಚಾಲಕ ಜಗದೀಶ್ ಎಂಬವರು ಡಿಪೋ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರಕರಣದಲ್ಲಿ ಸಚಿವ ಚಲುವರಾಯಸ್ವಾಮಿ ಹೆಸರು ಕೇಳಿಬಂದಿದ್ದು, ಈ ಪ್ರಕರಣ ರಾಜಕೀಯ ತಿರುವನ್ನು ಕೂಡ ಪಡೆದುಕೊಂಡು ಭಾರೀ ಟೀಕೆಗಳಿಗೆ ಕಾರಣವಾಗುತ್ತಿದೆ. ಇತ್ತ ಕಡೆ ಸರ್ಕಾರ ಮತ್ತು ವಿಪಕ್ಷಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡಿದ್ದಾರೆ.
ಇದಕ್ಕೂ ಮುನ್ನ ಹಾವೇರಿಯ ರಾಣೆಬೇನ್ನೂರು ನಗರ ಹೊರ ಹೊಲಯದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿಪೋ ಆವರಣದಲ್ಲಿ ಮಲ್ಲನಗೌಡ ಬಡಗೇರ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಆತ್ಮಹತ್ಯೆಗೆ ನಿಕರವಾದ ಕಾರಣ ತಿಳಿದುಬಂದಿಲ್ಲ. ಮೇಲಾಧಿಕಾರಿಗಳ ಕಿರುಕುಳ ಆರೋಪಗಳ ಸಂಬಂಧ ಅನೇಕ ಬಾರಿ ನ ಸಾರಿಗೆ ನೌಕರರು ಕೂಡ ಪ್ರತಿಭಟನೆಗಳು ಕೂಡ ಮಾಡಿದ್ದಾರೆ.