ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ಒಂದು ದಿನದ ಭೇಟಿಗಾಗಿ ಶನಿವಾರ ಅಬುಧಾಬಿಗೆ ಪ್ರವಾಸ ಕೈಗೊಂಡಿದ್ದು, ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ, “ನಹ್ಯಾನ್ ಅವರ ಶಕ್ತಿ ಮತ್ತು ಅಭಿವೃದ್ಧಿಯ ದೃಷ್ಟಿ ಶ್ಲಾಘನೀಯ” ಎಂದು ಹೇಳಿದ್ದಾರೆ.
ಎರಡು ದಿನಗಳ ಯಶಸ್ವಿ ಪ್ಯಾರಿಸ್ ಭೇಟಿಯ ವೇಳೆ ಪ್ರಧಾನಿ ಮೋದಿ ಅಲ್ಲಿ ಗೌರವ ಅತಿಥಿಯಾಗಿ ಬಾಸ್ಟಿಲ್ ಡೇ ಪರೇಡ್ಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ಗೆ ಜೊತೆಗೂಡಿದ್ದರು. ಈ ವೇಳೆ ಅವರು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಹಲವಾರು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಇದನ್ನೂ ಓದಿ:ಫ್ರಾನ್ಸ್ ಪ್ರವಾಸದಲ್ಲಿ ಮೋದಿ | ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲಿರುವ EU!
ಯುಎಇ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಶೇಖ್ ಅಲ್ ನಹ್ಯಾನ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. ಭೇಟಿಯ ನಂತರ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, “ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾಗಲು ಯಾವಾಗಲೂ ಸಂತೋಷವಾಗುತ್ತದೆ. ಅವರ ಶಕ್ತಿ ಮತ್ತು ಅಭಿವೃದ್ಧಿಯ ದೃಷ್ಟಿ ಶ್ಲಾಘನೀಯ. ಸಾಂಸ್ಕೃತಿಕ ಮತ್ತು ಆರ್ಥಿಕ ಸಂಬಂಧಗಳನ್ನು ಹೆಚ್ಚಿಸುವ ಮಾರ್ಗಗಳು ಸೇರಿದಂತೆ ಭಾರತ-ಯುಎಇ ಬಾಂಧವ್ಯಗಳ ಸಂಪೂರ್ಣ ಶ್ರೇಣಿಯ ಕುರಿತು ನಾವು ಚರ್ಚಿಸಿದ್ದೇವೆ” ಎಂದು ಹೇಳಿದ್ದಾರೆ.
It is always gladdening to meet HH Sheikh Mohamed bin Zayed Al Nahyan. His energy and vision for development are admirable. We discussed the full range of India-UAE ties including ways to boost cultural and economic ties. @MohamedBinZayed pic.twitter.com/XCBWW8cP38
— Narendra Modi (@narendramodi) July 15, 2023
2-ರಾಷ್ಟ್ರಗಳ ಭೇಟಿಯ ಆರಂಭದಲ್ಲಿ ತಮ್ಮ ಹೇಳಿಕೆ ನೀಡಿದ್ದ ಪ್ರಧಾನಿ ಮೋದಿ, ನನ್ನ ಸ್ನೇಹಿತ, ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದರು. “ನಮ್ಮ ಎರಡು ದೇಶಗಳು ವ್ಯಾಪಾರ, ಹೂಡಿಕೆ, ಇಂಧನ, ಆಹಾರ ಭದ್ರತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ಫಿನ್ಟೆಕ್, ರಕ್ಷಣೆ, ಭದ್ರತೆ ಮತ್ತು ಜನರ ಸಂಬಂಧಗಳಂತಹ ವ್ಯಾಪಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿವೆ” ಎಂದು ಅವರು ಹೇಳಿದ್ದರು.
ಇದನ್ನೂ ಓದಿ: ಮಿಲಿಟರಿ ಮೈತ್ರಿಕೂಟದತ್ತ ಜಾರುತ್ತಿರುವ ಭಾರತ
ಇಂಧನ, ಆಹಾರ ಭದ್ರತೆ ಮತ್ತು ರಕ್ಷಣೆಯು ಪ್ರಧಾನ ಮಂತ್ರಿ ಮೋದಿಯವರ ಯುಎಇ ಭೇಟಿಯ ಕೇಂದ್ರಬಿಂದುವಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಭಾರತ ಮತ್ತು ಯುಎಇ ವ್ಯಾಪಾರ, ಹೂಡಿಕೆ, ಇಂಧನ, ಆಹಾರ ಭದ್ರತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ಫಿನ್ಟೆಕ್, ರಕ್ಷಣೆ, ಭದ್ರತೆಯಂತಹ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿವೆ.
ಯುಎಇಯಲ್ಲಿ ಭಾರತೀಯ ಸಮುದಾಯವು ಅತಿ ದೊಡ್ಡ ವಲಸಿಗ ಸಮುದಾಯವಾಗಿದ್ದು, ದೇಶದ ಜನಸಂಖ್ಯೆಯ ಸರಿಸುಮಾರು 30% ಭಾರತೀಯರು ಅಲ್ಲಿದ್ದಾರೆ. ಯುಎಇ ದಾಖಲೆಗಳ ಪ್ರಕಾರ 2021 ರಲ್ಲಿ ಭಾರತೀಯ ನಿವಾಸಿಗಳ ಸಂಖ್ಯೆ 35 ಲಕ್ಷ ಎಂದು ಅಂದಾಜಿಸಲಾಗಿದೆ.