ಮಣಿಪುರ:ಸರ್ಕಾರವು ಕ್ರಮಕೈಗೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ ,ಸುಪ್ರೀ ಕೋರ್ಟ್ ಕಠಿಣ ಎಚ್ಚರಿಕೆ

ಹೊಸದಿಲ್ಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ ವೈರಲ್‌ ವಿಡಿಯೊ ಕುರಿತಂತೆ ಕೆಂಡಾಮಂಡಲಾಗಿರುವ ಸುಪ್ರೀಂ ಕೋರ್ಟ್‌, ಸರ್ಕಾರ ಕ್ರಮ ತೆದುಕೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ ಎಂದು ಕಠಿಣ ಎಚ್ಚರಿಕೆ ನೀಡಿದೆ.

ಈ ಘಟನೆ  ಕುರಿತು ಪ್ರತಿಕ್ರಿಯಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಅವರು,ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ ಮತ್ತು ಈ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಯನ್ನು ಖಚಿಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ  ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಣಿಪುರ ಹಿಂಸಾಚಾರ | ಯುವತಿಯರ ಬೆತ್ತಲೆ ಮೆರವಣಿಗೆ; ಸಾಮೂಹಿಕ ಅತ್ಯಾಚಾರ

ಮಹಿಳೆಯ ಮೇಲಿನ ದೌರ್ಜನ್ಯದ ದೃಶ್ಯಗಳೂ ಸಾಂವಿಧಾನಿಕ ವೈಫಲ್ಯವನ್ನು  ತೋರಿಸಿದೆ ಎಂದು ಸುಪ್ರೀಂ ಕೋರ್ಟ್‌, ಹೇಳಿದೆ. ಅಂತೆಯೇ ಜುಲೈ 28 ರಂದು ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದರು.

ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ವಿಡಿಯೋಗಳ ಬಗ್ಗೆ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ.ನಾವು ನಮ್ಮ ಆಳವಾದ  ತೀವ್ರ ಕಳವಳನ್ನು ವ್ಯಕ್ತಪಡಿಸುತ್ತಿದ್ದೇವೆ.ಇದು ಸರ್ಕಾರ ಕ್ರಮಕೈಗೊಳ್ಳುವ ಸಮಯವಾಗಿದೆ.ಇದು ಸ್ವೀಕಾರಾರ್ಹವಲ್ಲ. ಸರ್ಕಾರವು ಕ್ರಮಕೈಗೊಳ್ಳದಿದ್ದರೆ ನಾವು ಮಧ್ಯಪ್ರವೇಶ ಮಾಡಬೇಕಾಗುತ್ತೆ ಎಂದು ಪಿ.ಎಸ್‌ ನರಸಿಂಹ ಮತ್ತು ಮನೋಜ್‌ ಮಿಶ್ರ ಒಳಗೊಂಡ ಪೀಠವು ಹೇಳಿದೆ.

Donate Janashakthi Media

Leave a Reply

Your email address will not be published. Required fields are marked *