ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗುತ್ತಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಭೇಟಿ ನೀಡಿ ಎಕ್ಸ್ ಪ್ರೆಸ್ ಹೈವೇ ಪರಿಶೀಲಿಸಿದ್ದಾರೆ.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ಭೇಟಿಯಾದ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್
ಪೊಲೀಸರು ಹಾಗೂ ಅಧಿಕಾರಿಗಳೊಂದಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದರು. ನಂತರ ಅಧಿಕಾರಿಗಳು ಹಾಗೂ ಪೊಲೀಸರ ಬಳಿ ಹೈವೇ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಸಿಎಂ ಆದ ಬಳಿಕ ಮೊದಲ ಬಾರಿಗೆ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯ ತಾಲೂಕಿನ ಗುಮ್ಮಡಹಳ್ಳಿ ಗೇಟ್ ಹೆದ್ದಾರಿ ವೀಕ್ಷಣೆ ನಡೆಸಿದ್ದಾರೆ. ಅಪಘಾತ ಹೆಚ್ಚಾದ ಹಿನ್ನೆಲೆ ಅಳವಡಿಸಿದ 360° ಕ್ಯಾಮರಾ ವೀಕ್ಷಿಸಿದರು. ನಂತರ ರಸ್ತೆ ಪರಿಶೀಲನೆ ನಡೆಸಿ, ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದರು.
ಉದ್ಘಾಟನೆ ಆದಾಗಿನಿಂದ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಈ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್ನಂತಹ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿತ್ತು.
ಇತ್ತೀಚೆಗೆ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ @siddaramaiah ಅವರು ಇಂದು ಮಂಡ್ಯ ಸಮೀಪದ ಅಮರಾವತಿ ಹೋಟೆಲ್ ಬಳಿ (ಬೆಂಗಳೂರಿನಿಂದ 93 km ಅಂತರ) ರಸ್ತೆ ಪರಿಶೀಲನೆ ನಡೆಸಿ, ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದರು. pic.twitter.com/EaRX1EvksG
— CM of Karnataka (@CMofKarnataka) July 29, 2023